ಗುಬ್ಬಿ ಪಟ್ಟಣದ ಬೇಟೆರಾಯ ರಥೋತ್ಸವ
ಗುಬ್ಬಿ: ಪಟ್ಟಣದ ಬೇಟೆರಾಯ ಜಾತ್ರೆಯ ಅಂಗವಾಗಿ ಸೋಮವಾರ ರಥೋತ್ಸವವು ಧಾರ್ಮಿಕ ವಿಧಿ, ವಿಧಾನದೊಂದಿಗೆ ಅದ್ದೂರಿಯಾಗಿ ನೆರವೇರಿತು.
ಬೆಳಗ್ಗೆ ದೇವಾಲಯದಲ್ಲಿ ಮೂರ್ತಿಗೆ ಗಂಗಾಭಿಷೇಕ, ಗಂಧದ ಅಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕ ನಂತರ ಅರ್ಚನೆ ಮಾಡಲಾಯಿತು.
ಮೂರ್ತಿಯನ್ನು ಅಲಂಕರಿಸಿ ಮಂಗಳಾರತಿ ನೆರವೇರಿಸಲಾಯಿತು.
ಮಧ್ಯಾಹ್ನ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ತಂದು ಪುಷ್ಪಾಲಂಕೃತ ರಥದಲ್ಲಿ ಕೂರಿಸಲಾಯಿತು. ನಮತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಭಕ್ತಾದಿಗಳಿಗೆ ಪಾನಕ, ಫಲಹಾರ, ಮಜ್ಜಿಗೆ ವಿತರಿಸಲಾಯಿತು. ಮಧ್ಯಾಹ್ನದಿಂದ ರಾತ್ರಿಯವರೆಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ರಥೋತ್ಸವದ ನಂತರ ಸಂಜೆ ಉಯ್ಯಾಲೋತ್ಸವ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.