ADVERTISEMENT

ತಾಯಿ, ಮಕ್ಕಳ ಆಸ್ಪತ್ರೆಗೆ 28ರಂದು ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2023, 16:36 IST
Last Updated 28 ಸೆಪ್ಟೆಂಬರ್ 2023, 16:36 IST

ಕುಣಿಗಲ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದಲ್ಲಿ ₹60 ಕೋಟಿ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸಂಸದ ಡಿ.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಾಗಿ ಇನ್ಫೊಸಿಸ್‌ ಸಂಸ್ಥೆಗೆ ಮನವಿ ಮಾಡಿದ ಮೇರೆಗೆ ₹60 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ₹30 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಗೂ ಭೂಮಿಪೂಜೆ ಮಾಡಲಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ್, ಪುರಸಭೆ ಸದಸ್ಯ ಮಲ್ಲಿಪಾಳ್ಯ ಶ್ರೀನಿವಾಸ್, ಮುಖಂಡರಾದ ಚಂದ್ರಶೇಖರ್, ರೆಹಮಾನ್ ಷರೀಫ್, ಶಂಕರ್, ಏಜಾಸ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.