ADVERTISEMENT

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 7:52 IST
Last Updated 31 ಜುಲೈ 2025, 7:52 IST
ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಗೂಬಲಗುಟ್ಟೆಯಲ್ಲಿ ₹7 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಭೂಮಿಪೂಜೆ ನೆರವೇರಿಸಿದರು
ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಗೂಬಲಗುಟ್ಟೆಯಲ್ಲಿ ₹7 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಭೂಮಿಪೂಜೆ ನೆರವೇರಿಸಿದರು   

ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಹಾಳಾಗಿರುವ ಎಲ್ಲ ರಸ್ತೆಗಳನ್ನು ಶೀಘ್ರ ಅಭಿವೃದ್ಧಿಪಡಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಭರವಸೆ ನೀಡಿದರು.

ತಾಲ್ಲೂಕಿನ ದೊಡ್ಡೇರಿ ಹಾಗೂ ಕಸಬಾ ಹೋಬಳಿಯ ₹7 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಈ ಭಾಗದ ಕೆಲ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿರುವುದನ್ನು ಮನಗಂಡು ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದರು.

ADVERTISEMENT

ಶೀಘ್ರದಲ್ಲೇ ಕವಣದಾಲ ಗ್ರಾಮದಲ್ಲಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಪ್ರಾರಂಭಿಸಲಾಗುವುದು. ತಾಲ್ಲೂಕಿನ ಕೆ.ಟಿ.ಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭ ಮಾಡುವಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗೆ ಸೂಚಿಸಿದರು.

ಪಟ್ಟಣದಲ್ಲಿ ₹75.15 ಲಕ್ಷ ವೆಚ್ಚದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ, ರಂಗಾಪುರ ಗೊಲ್ಲರಹಟ್ಟಿ, ಹುಣಸೆ ಮರದ ಹಟ್ಟಿ, ಕಾಟಗಾನಹಟ್ಟಿ ಗ್ರಾಮದಲ್ಲಿ ತಲಾ ₹30 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ ರಾಜಣ್ಣ, ಕೆಪಿಸಿಸಿ ಸದಸ್ಯ ಎಂ.ಎಸ್.ಮಲ್ಲಿಕಾರ್ಜನಯ್ಯ, ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ, ಗ್ರಾ.ಪಂ ಅಧ್ಯಕ್ಷೆ ದಿವ್ಯಶ್ರೀ, ತಹಶೀಲ್ದಾರ್ ಶಿರೀನ್ ತಾಜ್, ತಾ.ಪಂ ಇಪ ಲಕ್ಷ್ಮಣ್, ಯೋಜನಾಧಿಕಾರಿ ಮಧುಸೂದನ್, ಬಿಇೊ ಹನುಮಂತರಾಯಪ್ಪ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಲೋಕೇಶ್ವರಪ್ಪ, ಲೋಕೋಪಯೋಗಿ ಇಇ ಹನುಮಂತರಾವ್, ಜಿ. ಪಂ ಎಇಇ ಮಂಜುನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.