ADVERTISEMENT

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 16:07 IST
Last Updated 20 ಜೂನ್ 2019, 16:07 IST

ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪ ಬುಧವಾರ ರಾತ್ರಿ ರಸ್ತೆ ಬದಿ ನಿಂತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ.

ರಾಜಶೇಖರ್ (43) ಮೃತಪಟ್ಟವರು. ಬಂಡೇಪಾಳ್ಯ ನಿವಾಸಿಯಾಗಿದ್ದರು. ರಾತ್ರಿ ಹತ್ತು ಗಂಟೆ ಸುಮಾರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತ ಆಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT