
ಪ್ರಜಾವಾಣಿ ವಾರ್ತೆಪಾವಗಡ: ತಾಲ್ಲೂಕಿನ ಕರೆಕ್ಯಾತನಹಳ್ಳಿ ಬಳಿ ಶನಿವಾರ ಅಪರಿಚಿತ ವಾಹನ ದ್ವಿಚಕ್ರ ವಾಹನದ ಮೇಲೆ ಹರಿದ ಪರಿಣಾಮ ಬೈಕ್ ಸವಾರ ಅರಸೀಕೆರೆ ಗ್ರಾಮದ ಜೆಸಿಬಿ ಚಾಲಕ ಕುಮಾರ್ (22) ಮೃತಪಟ್ಟಿದ್ದಾರೆ.
ಅರಸೀಕೆರೆ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದ ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ ಹರಿದಿದೆ. ಅರಸೀಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.