ADVERTISEMENT

ಅಪಘಾತದಲ್ಲಿ ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2024, 14:08 IST
Last Updated 28 ಜನವರಿ 2024, 14:08 IST

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ತಿಮ್ಲಾಪುರ ಗ್ರಾಮದ ಬಳಿ ಭಾನುವಾರ ಕಾರು ಮತ್ತು ಬೈಕ್‌ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಹೊನ್ನವಳ್ಳಿಯ ಸೋಮಶೇಖರ್‌ (42) ಮೃತರು. ಉಮೇಶ್‌ (40) ಎಂಬುವರು ಗಾಯಗೊಂಡಿದ್ದು, ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮಶೇಖರ್‌ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅವರೆಕಾಯಿಯನ್ನು ತಿಪಟೂರು ನಗರದ ಬೀದಿ ಬದಿಯಲ್ಲಿ ಮಾರಾಟ ಮಾಡಿ ಊರಿಗೆ ವಾಪಸ್ ಹೋಗುವಾಗ ಅಪಘಾತವಾಗಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.