ADVERTISEMENT

ತುಮಕೂರು: ಬೈಕ್‌ ಕಳ್ಳನ ಬಂಧನ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 14:28 IST
Last Updated 18 ಡಿಸೆಂಬರ್ 2023, 14:28 IST
   

ತುಮಕೂರು: ಜಿಲ್ಲೆಯ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿ ಇರ್ಫಾನ್ ಅಲಿಯಾಸ್ ಫಾಕ್ಸ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇರ್ಫಾನ್‌ ಹೊನ್ನುಡಿಕೆ ಬಳಿ ಅನುಮಾನಾಸ್ಪದವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ. ಅಗತ್ಯ ದಾಖಲೆ ಕೇಳಿದಾಗ ಸೂಕ್ತ ಉತ್ತರ ನೀಡಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದು ವಿಚಾರ ನಡೆಸಿದಾಗ ಕಳ್ಳತನ ಮಾಡಿರುವ ವಿಚಾರ ಗೊತ್ತಾಗಿದೆ.

11 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಕ್‌ ಕದ್ದು ವ್ಹೀಲಿಂಗ್‌ ಮಾಡಲು ಬಾಡಿಗೆಗೆ ಕೊಡುತ್ತಿದ್ದ. ಪ್ರತಿಯೊಂದು ಬೈಕ್‌ಗೆ ₹5 ಸಾವಿರ ಪಡೆಯುತ್ತಿದ್ದ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.