ತುಮಕೂರು: ನಗರದ ಗಂಗೋತ್ರಿ ರಸ್ತೆಯಲ್ಲಿರುವ ‘ಬಿರಿಯಾನಿ ಹೌಸ್’ ಮಳಿಗೆಯಲ್ಲಿ ಗುರುವಾರ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ನಷ್ಟವಾಗಿದೆ.
ಮಳಿಗೆಯ ನೆಲ ಮಹಡಿಯಲ್ಲಿದ್ದ ಸಾಮಗ್ರಿಗಳು ಬೆಂಕಿಗೆ ಸುಟ್ಟು ಹೋಗಿವೆ. 2 ಕೂಲರ್, ಇತರೆ ಪರಿಕರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಆದಿ ನಾನ್ ಅಖಿಲ್ ಎಂಬುವರು ಹಲವು ವರ್ಷಗಳಿಂದ ಬಿರಿಯಾನಿ ಮಳಿಗೆ ನಡೆಸುತ್ತಿದ್ದರು. ಮಳಿಗೆಯಲ್ಲಿ ಸಿಬ್ಬಂದಿ ಕೆಲಸ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರು ಮಳಿಗೆಯಿಂದ ಹೊರಗಡೆ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ವಿಷಯ ತಿಳಿದ ಕೂಡಲೇ ಮಳಿಗೆಯ ಬಳಿ ಹೆಚ್ಚಿನ ಜನ ಸಂದಣಿ ಸೇರಿತ್ತು. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.