ADVERTISEMENT

ನನಗೂ ಬಿಜೆಪಿ ಆಮಿಷ: ಶಾಸಕ ಬಿ.ಸತ್ಯನಾರಾಯಣ ಆರೋಪ

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 14:53 IST
Last Updated 20 ಜುಲೈ 2019, 14:53 IST
ಬಿ.ಸತ್ಯನಾರಾಯಣ
ಬಿ.ಸತ್ಯನಾರಾಯಣ   

ಶಿರಾ: ‘ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಜಗದೀಶ್‌ ಶೆಟ್ಟರ್ ಅವರು ಕರೆ ಮಾಡಿ ಬಿಜೆಪಿಗೆ ಆಹ್ವಾನಿಸಿದ್ದರು. ಯಾವುದೇ ಕಾರ
ಣಕ್ಕೂ ನಾನು ಜೆಡಿಎಸ್ ಪಕ್ಷ ಬಿಡುವ ಪ್ರಶ್ನೆ ಇಲ್ಲ ಎಂದು ಹೇಳಿದ್ದೆ’ ಎಂದು ಶಾಸಕ ಬಿ.ಸತ್ಯನಾರಾಯಣ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೆಟ್ಟರ್ ಅವರು ನನಗೆ ದೂರವಾಣಿ ಕರೆ ಮಾಡಿ ನೀವು ಹಿರಿಯ ನಾಯ
ಕರು. ಜೆಡಿಎಸ್ ಪಕ್ಷದಲ್ಲಿ ನಿಮಗೆ ಅನ್ಯಾಯವಾಗಿದೆ. ಆ ಪಕ್ಷ ಬಿಟ್ಟು ಬಿಜೆಪಿಗೆ ಬನ್ನಿ. ಗೌರವಯುತವಾಗಿ ನಡೆಸಿಕೊಂಡು ಮಂತ್ರಿ ಸ್ಥಾನ ನೀಡುತ್ತೇವೆ. ಅಲ್ಲದೇ, ಚುನಾವಣೆಗೆ ನಿಮಗೆ ಅಥವಾ ನಿಮ್ಮ ಮಗನಿಗೆ ಟಿಕೆಟ್ ನೀಡಿ ಎಲ್ಲಾ ಖರ್ಚು ಭರಿಸುವುದಾಗಿ ಆಮಿಷ ತೋರಿಸಿದ್ದರು' ಎಂದರು.

'ಹಣ ಮತ್ತು ಅಧಿಕಾರಕ್ಕಾಗಿ ರಾಜ್ಯದಲ್ಲಿ ಶಾಸಕರು ದನ ಕರುಗಳ ರೀತಿಯಲ್ಲಿ ಮಾರಾಟವಾಗುತ್ತಿರುವುದು ನಾಚಿಕೆಗೇಡಿನ ವಿಷಯ' ಎಂದು ಖಂಡಿಸಿದರು.

ADVERTISEMENT

ಚುನಾವಣೆ : ‘ಸರ್ಕಾರವನ್ನು ಬುಡಮೇಲು ಮಾಡಲು ಬಿಜೆಪಿ ಪಕ್ಷದವರು ರಾಜ್ಯಪಾಲರ ಕಚೇರಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾನು ಎಷ್ಟು ದಿನ ಶಾಸಕನಾಗಿರುತ್ತೇನೆ ಎನ್ನುವುದು ತಿಳಿದಿಲ್ಲ. ರಾಜ್ಯಪಾಲರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಅವರು ಯಾವುದೇ ಕ್ಷಣದಲ್ಲಿ ಬೇಕಾದರೂ ತೀರ್ಮಾನ ತೆಗೆದುಕೊಳ್ಳಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.