ತುಮಕೂರು: ಮಾಜಿ ಶಾಸಕ ಬಿ.ಸುರೇಶ್ ಗೌಡ ಜೊತೆ ಸೇರಿ ಸರ್ಕಾರಿ ಅಧಿಕಾರಿಗಳುಬಡವರಿಗೆ ಹಂಚಬೇಕಾಗಿದ್ದ ಭೂಮಿಯನ್ನು ಶ್ರೀಮಂತರಿಗೆ ಹಂಚಿದ್ದಾರೆ. ಕೋಟ್ಯಂತರ ರೂಪಾಯಿ ಕಬಳಿಸಿರುವ ತಹಶೀಲ್ದಾರ್ ನಾಗರಾಜು ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಸಕ ಡಿ.ಸಿ.ಗೌರಿಶಂಕರ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಭೇಟಿ ಮಾಡಿ ತಹಶೀಲ್ದಾರ್ ನಾಗರಾಜು ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.
ಗೌರಿಶಂಕರ್ ಮಾತನಾಡಿ, ‘ಲೋಕಸಭಾ ಚುನಾವಣೆ ಇನ್ನು ನಾಲ್ಕು ದಿನ ಇರುವಾಗ ಈ ಅವ್ಯವಹಾರಗಳು ನಡೆದಿದೆ. ಈ ಅವ್ಯವಹಾರವನ್ನು ತನಿಖೆ ಮಾಡುವಂತೆ ಎಸಿಬಿ, ಲೋಕಾಯುಕ್ತ, ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.