ತುಮಕೂರು: ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಭದ್ರಮ್ಮ ವೃತ್ತದಲ್ಲಿರುವ ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಧರ್ಮಸ್ಥಳದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಕೊಲೆಗಳು ನಡೆದಿವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸುಳ್ಳು ಸುದ್ದಿ ಹರಡಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಸಾಮಾಜಿಕ ಜಾಲ ತಾಣದಲ್ಲಿ ಧರ್ಮಸ್ಥಳ, ಧರ್ಮಾಧಿಕಾರಿಯನ್ನು ನಿಂದಿಸಲಾಗುತ್ತಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ಧವೂ ಕ್ರಮ ಜರುಗಿಸಬೇಕು. ಅನಾಮಿಕ ವ್ಯಕ್ತಿಯ ಹಿಂದಿರುವ ದುಷ್ಟ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡರಾದ ಬ್ಯಾಟರಂಗೇಗೌಡ, ಸಂದೀಪ್‍ಗೌಡ, ಎಚ್.ಎಂ.ರವೀಶಯ್ಯ, ಸತ್ಯಮಂಗಲ ಜಗದೀಶ್, ಜ್ಯೋತಿ ತಿಪ್ಪೇಸ್ವಾಮಿ, ಕೆ.ಸಂದೀಪ್, ಟಿ.ಎಚ್.ಹನುಮಂತರಾಜು, ವಿರೂಪಾಕ್ಷಪ್ಪ, ನವಚೇತನ್, ಕೆ.ವೇದಮೂರ್ತಿ, ಎಚ್.ಎ.ಆಂಜನಪ್ಪ, ಸುಮಿತ್ರಮ್ಮ, ಸಿ.ಎನ್.ರಮೇಶ್, ವಿಷ್ಣುವರ್ಧನ್, ಮಲ್ಲಿಕಾರ್ಜುನ್, ಪುಟ್ಟರಾಜು, ಕೊಪ್ಪಲ್ ನಾಗರಾಜ್, ರಾಜಶೇಖರ್, ಆಂಜನಮೂರ್ತಿ, ಹನುಮಂತರಾಜು, ಹನುಮಂತರಾಯಪ್ಪ, ಗಂಗೇಶ್ ಹದ್ದಿನಕಲ್ಲು, ಇಂದ್ರಕುಮಾರ್, ಅಕ್ಷಯ್ ಚೌಧರಿ, ನಿಸರ್ಗ ರಮೇಶ್, ವಿಜಯ ಭಾಸ್ಕರ್, ಆದ್ಯ, ಲತಾ ಬಾಬು, ರವಿ, ನಾಗರಾಜರಾವ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.