ಮಧುಗಿರಿ: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಡ್ರೋನ್ ಪ್ರತಾಪ್ ಅವರಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಡಿ. 26ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರ್ಮ್‌ನ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಕೆಲವು ದಿನಗಳ ಹಿಂದೆ ಸೋಡಿಯಂ ಬಳಸಿ ಸ್ಫೋಟಿಸಿದ್ದರು. ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದರು.
ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.