ADVERTISEMENT

ಹುಳಿಯಾರು | ಆನೆಕಾಲು ರೋಗ ಪತ್ತೆಗೆ ರಕ್ತದ ಮಾದರಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 14:28 IST
Last Updated 27 ಅಕ್ಟೋಬರ್ 2024, 14:28 IST
ಹುಳಿಯಾರು ಹೋಬಳಿ ಸೋಮನಹಳ್ಳಿ ಗ್ರಾಮದಲ್ಲಿ ಆನೆಕಾಲು ರೋಗ ಪತ್ತೆಗೆ ಗ್ರಾಮಸ್ಥರಿಂದ ರಕ್ತದ ಮಾದರಿ ಸಂಗ್ರಹಿಸಲಾಯಿತು
ಹುಳಿಯಾರು ಹೋಬಳಿ ಸೋಮನಹಳ್ಳಿ ಗ್ರಾಮದಲ್ಲಿ ಆನೆಕಾಲು ರೋಗ ಪತ್ತೆಗೆ ಗ್ರಾಮಸ್ಥರಿಂದ ರಕ್ತದ ಮಾದರಿ ಸಂಗ್ರಹಿಸಲಾಯಿತು   

ಹುಳಿಯಾರು: ಹೋಬಳಿಯ ಸೋಮನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆನೆಕಾಲು ರೋಗ ಪತ್ತೆಗೆ ಆರೋಗ್ಯ ಇಲಾಖೆಯಿಂದ ಗ್ರಾಮಸ್ಥರ ರಕ್ತದ ಮಾದರಿ ಸಂಗ್ರಹಿಸಲಾಯಿತು.

ಉತ್ತರ ಭಾರತದಲ್ಲಿ ಆನೆಕಾಲು ರೋಗ ಕಾಣಿಸಿಕೊಂಡಿದ್ದು, ಅಲ್ಲಿಂದ ಇತ್ತೀಚೆಗೆ ಬಹುತೇಕ ಕೂಲಿ ಕಾರ್ಮಿಕರು ಕೆಲಸ ಅರಿಸಿ ರಾಜ್ಯದ ವಿವಿಧ ಕಡೆ ಬರುತ್ತಿರುವುದರಿಂದ ಕಾರ್ಯಾಚರಣೆ ಆರಂಭವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆಲದಕಟ್ಟೆ ಹಾಗೂ ಹುಳಿಯಾರು ಹೋಬಳಿ ಸೋಮನಹಳ್ಳಿ ಗ್ರಾಮದಲ್ಲಿ ಇಬ್ಬರಿಗೆ ರೋಗ ಸಂಶಯಾಸ್ಪದವಾಗಿ ಕಾಣಿಸಿ ಕೊಂಡಿದೆ. ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಬಂದ ಮಾಹಿತಿ ಮೇರೆಗೆ ರಕ್ತದ ಮಾದರಿ ತೆಗೆಯುವ ಕಾರ್ಯ ನಡೆಸಲಾಗುತ್ತಿದೆ. ಬೇರೆ ರಾಜ್ಯದಿಂದ ಬಂದಿರುವ ಒಬ್ಬರಲ್ಲಿ ರೋಗ ಪತ್ತೆಯಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ರಕ್ತ ಪರೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಯಶ್ವಂತ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.