
ಪ್ರಜಾವಾಣಿ ವಾರ್ತೆತುಮಕೂರು: ನಗರ ಹೊರವಲಯದ ಅಕ್ಕ ತಂಗಿ ಕೆರೆಯಲ್ಲಿ ಶುಕ್ರವಾರ ಕೊಳೆತ ಸ್ಥಿತಿಯಲ್ಲಿ ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಕೆರೆಯ ಬಳಿ ಹೋದವರು ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿ ದಿನಗಳು ಆಗಿರಬಹುದು. ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.