ತುಮಕೂರು: ಸಶಸ್ತ್ರ ಮತ್ತು ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ಸೋಮವಾರ (ಮೇ 13) ಬೆಳಿಗ್ಗೆ 7ಕ್ಕೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಸಲಾಗುವುದು.
ಈಗಾಗಲೇ ತಿಳಿಸಿರುವ ಅರ್ಹ ಅಭ್ಯರ್ಥಿಗಳು ದಾಖಲೆಗಳೊಂದಿಗೆ ನಿಗದಿತ ವೇಳೆಯೊಳಗೆ ಹಾಜರಿರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.