ADVERTISEMENT

ತುಮಕೂರು: ಲಾರಿಗೆ ಬುಲೆರೊ ಡಿಕ್ಕಿ, ಸ್ಥಳದಲ್ಲೇ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 5:20 IST
Last Updated 20 ಜುಲೈ 2022, 5:20 IST
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ವಾಹನಗಳು
ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ವಾಹನಗಳು   

ತುಮಕೂರು: ರಸ್ತೆಯ ಪಕ್ಕ ನಿಂತಿದ್ದ ಲಾರಿಗೆ ಬುಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಬುಲೆರೊದಲ್ಲಿದ್ದ ಜೋಸೆಫ್ (32) ಎಂಬುವವರು ಮೃತಪಟ್ಟ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಕಾಮತ್ ಹೋಟೆಲ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ತಮಿಳುನಾಡು ನೋಂದಣಿಯ ಬುಲೆರೊ ಶಿರಾ ಕಡೆಯಿಂದ ತುಮಕೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಬುಲೆರೊ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.