ADVERTISEMENT

ಏ.22ರಂದು ಭೂಮಿ ದಿನ; ಸಾಕ್ಷ್ಯ ಚಿತ್ರ ಪ್ರದರ್ಶನ, ಯುವ ಜನರೊಂದಿಗೆ ಸಂವಾದ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 14:16 IST
Last Updated 20 ಏಪ್ರಿಲ್ 2019, 14:16 IST
ಭೂಮಿದಿನ
ಭೂಮಿದಿನ   

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸಿಜ್ಞಾ ಯುವ ಸಂವಾದ ಕೇಂದ್ರದಿಂದ ಏ.22ರಂದು ಬೆಳಿಗ್ಗೆ 10.30ಕ್ಕೆ ವಿ.ವಿಯ ಪರೀಕ್ಷಾ ಭವನದಲ್ಲಿ ಭೂಮಿ‌ ದಿನ ನಡೆಯಲಿದೆ.

ಜೀವ ಸಂಕುಲ–ಸಂರಕ್ಷಣೆ ಕುರಿತು ‘ಗ್ರೀನ್’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಸಂವಾದ ಇರಲಿದೆ. ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಧ್ಯಕ್ಷತೆ ವಹಿಸುವರು. ಪರಿಸರ ಸ್ನೇಹಿ ವಸ್ತ್ರ ವಿನ್ಯಾಸಕಿ ಎಂ.ಶಮಾ ಕಾರ್ಯಕ್ರಮ ಉದ್ಘಾಟಿಸುವರು. ಸಿಜ್ಞಾ ಯುವ ಸಂವಾದ ಕೇಂದ್ರದ ಜ್ಞಾನ ಸಿಂಧೂ ಸ್ವಾಮಿ ಯುವಜನರ ಜೊತೆ ಸಂವಾದ ನಡೆಸುವರು.

ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ರಾಜನಾಯ್ಕ ಪಾಲ್ಗೊಳ್ಳುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.