ADVERTISEMENT

ಬಿಎಸ್‌ವೈ ಜನ್ಮದಿನ; ರೈತರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 15:45 IST
Last Updated 27 ಫೆಬ್ರುವರಿ 2020, 15:45 IST
ಮುಖ್ಯಮಂತ್ರಿ ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ರೈತರಿಗೆ ಅಗತ್ಯ ವಸ್ತುಗಳನ್ನು ನೀಡಿ, ಸನ್ಮಾನಿಸಲಾಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ರೈತರಿಗೆ ಅಗತ್ಯ ವಸ್ತುಗಳನ್ನು ನೀಡಿ, ಸನ್ಮಾನಿಸಲಾಯಿತು.   

ತುಮಕೂರು: ಜಿಲ್ಲೆಯ ಪ್ರಗತಿಪರ ರೈತರಿಗೆ ಸನ್ಮಾನ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ಸಾರ್ವಜನಿಕರು ಆಚರಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.

ನಗರದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ, ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೋರಾಟದಿಂದಲೇ ಮುಖ್ಯಮಂತ್ರಿಯಾದವರು ಯಡಿಯೂರಪ್ಪ. ಅವರು ರಾಜ್ಯದಲ್ಲಿ ಕೇವಲ ಇಬ್ಬರು ಬಿಜೆಪಿ ಶಾಸಕರಿದ್ದ ಸಮಯದಿಂದ ಪಕ್ಷ ಸಂಘಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಕೀರ್ತಿ ಅವರದ್ದು. ರೈತರು ಮತ್ತು ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಯಡಿಯೂರಪ್ಪ ರಾಷ್ಟ್ರಮಟ್ಟದಲ್ಲಿ ಹೆಸರುಗಳಿಸಿದ್ದಾರೆ ಎಂದರು.

ADVERTISEMENT

ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಅಧ್ಯಕ್ಷ ಚೆಂಗಾವಿ ರವಿ, ‘ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ಪ್ರಯುಕ್ತ ಗುಬ್ಬಿ, ತುರುವೇಕೆರೆ, ಶೆಟ್ಟಿಹಳ್ಳಿಯ ರೈತರಿಗೆ ಕೃಷಿಗೆ ಅಗತ್ಯವಾಗಿರುವ ವಸ್ತುಗಳನ್ನು ನೀಡಲಾಗಿದೆ. ಜೀವನದುದ್ದಕ್ಕೂ ರೈತ ಪರ ಕಾಳಜಿ ತೋರಿದ ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಸಾರ್ವಜನಿಕರೊಂದಿಗೆ ಆಚರಿಸುತ್ತಿರುವುದು ಸಂತಸದ ವಿಚಾರ’ ಎಂದರು.

100ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಭಿಲಾಷ್, ಜಿಲ್ಲಾ ಉಪಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ಪುಷ್ಪರಾಜ್, ಸಂಚಾಲಕ ಪ್ರಸನ್ನ ಕುಮಾರ್, ನಂದನ್ ಮಹಡಿಮನೆ, ಆಟೊ ಶಿವಕುಮಾರ್, ಶಿವದೇವ್, ದಿನೇಶ್ ಕುಮಾರ್, ನಾಗೇಂದ್ರ, ಪ್ರವೀಣ್ ಕುಮಾರ್, ಶ್ರೀಹರ್ಷ, ಶ್ರೀಧರ್, ಪ್ರವೀಣ್, ರಾಕೇಶ್, ಅರವಿಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.