ADVERTISEMENT

ತಿಪಟೂರು | ಮನೆಗೆ ನುಗ್ಗಿದ ಬಸ್: ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 29 ಜೂನ್ 2025, 7:36 IST
Last Updated 29 ಜೂನ್ 2025, 7:36 IST
   

ತಿಪಟೂರು: ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಭಾನುವಾರ ಕೆಎಸ್ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ಮನೆಗೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಸಿದ್ದಾಪುರ ಗ್ರಾಮದ ಪ್ರಸನ್ನ ಅವರ ಮನೆಗೆ ಹಾನಿಯಾಗಿದೆ. ಕಳೆದ ಫೆಬ್ರುವರಿಯಲ್ಲಿ ಗೃಹ ಪ್ರವೇಶ ನೆರವೇರಿಸಿದ್ದರು.

ಅರಸೀಕೆರೆ ಕಡೆಯಿಂದ ತಿಪಟೂರಿಗೆ ತೆರಳುತ್ತಿದ್ದ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಸುಮಾರು 150 ಮೀಟರ್ ದೂರ ಪ್ರಯಾಣಿಸಿ ರಸ್ತೆ ಬಳಿ ಇದ್ದ ಮನೆಗೆ ಡಿಕ್ಕಿ ಹೊಡೆದಿದೆ.

ADVERTISEMENT

ಸುಮಾರು 25 ಮಂದಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ ಪಿ ವಿನಾಯಕ ಶೆಟ್ಟಿಗೇರಿ ಸಬ್‌ ಇನ್‌ಸ್ಪೆಕ್ಟರ್ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.