ಸಾವು
(ಪ್ರಾತಿನಿಧಿಕ ಚಿತ್ರ)
ಕೊರಟಗೆರೆ: ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹರಿದು ಪಾದಚಾರಿ ಗುಂಡನಪಾಳ್ಯ ಗ್ರಾಮದ ಜಯಮ್ಮ(55) ಮೃತಪಟ್ಟಿದ್ದಾರೆ.
ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುವಾಗ ಪಾವಗಡ ಕಡೆಯಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಜಯಮ್ಮ ಮೇಲೆ ಬಸ್ ಚಕ್ರ ಹರಿದು ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಜಿ.ಚೇತನ್ ಕುಮಾರ್ ಭೇಟಿ ನೀಡಿದ್ದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.