
ಪ್ರಜಾವಾಣಿ ವಾರ್ತೆತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದ್ದಾರೆ.
ಬಸ್ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಗುರುವಾರ ಭೇಟಿನೀಡಿ ಪರಿಶೀಲಿಸಿದ ಅವರು, ‘ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಮತ್ತಷ್ಟು ಚುರುಕುಗೊಳಿಸಿ ಬೇಗ ಪೂರ್ಣಗೊಳಿಸಬೇಕು’ ಹೇಳಿದರು.
ಅಮಾನಿಕೆರೆ ಗಾಜಿನ ಮನೆ ಆವರಣದ ಸುತ್ತಮುತ್ತಲಿನ ಖಾಲಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಪರಿಶೀಲಿಸಿದರು. ಗಂಗಸಂದ್ರ ಕೆರೆಯ ಆವರಣದಲ್ಲಿ ನಡೆಯುತ್ತಿರುವ ಉದ್ಯಾನವನ ನಿರ್ಮಾಣ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ್ದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಬಿ.ವಿ.ಅಶ್ವಿಜ ಜತೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.