ADVERTISEMENT

ಧರ್ಮದಲ್ಲಿ ರಾಜಕೀಯ ಬೆರೆಸಬಾರದು: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:00 IST
Last Updated 27 ಡಿಸೆಂಬರ್ 2025, 6:00 IST
<div class="paragraphs"><p>ತುಮಕೂರಿನಲ್ಲಿ ಗುರುವಾರ ನಡೆದ ಜನ ಜಾಗೃತಿ ಧರ್ಮ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು. </p></div>

ತುಮಕೂರಿನಲ್ಲಿ ಗುರುವಾರ ನಡೆದ ಜನ ಜಾಗೃತಿ ಧರ್ಮ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.

   

ತುಮಕೂರು: ರಾಜಕೀಯದಲ್ಲಿ ಧರ್ಮ ಇರಬೇಕು. ಆದರೆ ಧರ್ಮದಲ್ಲಿ ಯಾವತ್ತೂ ರಾಜಕೀಯ ಬೆರೆಸಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಗುರುವಾರ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದಲ್ಲಿ ಮಾತನಾಡಿದರು.

ADVERTISEMENT

ವಿಜ್ಞಾನ, ನಾಗರಿಕತೆ ಮತ್ತು ರಾಜಕೀಯ ಸಂಘರ್ಷದಲ್ಲಿ ಧರ್ಮ ಸಂಸ್ಕೃತಿ ನಾಶಗೊಳ್ಳಬಾರದು. ‘ನೀತಿಯಿಲ್ಲದ ಶಿಕ್ಷಣ, ಭೀತಿಯಿಲ್ಲದ ಶಾಸನ, ಮಿತಿಯಿಲ್ಲದ ಜೀವನ ಸೀಮಾತೀತವಾದ ಸ್ವಾತಂತ್ರ್ಯ ಇವು ರಾಷ್ಟ್ರದ ವಿಘಾತಕಗಳು’ ಎಂಬ ರಂಭಾಪುರಿ ವೀರಗಂಗಾಧರ ಸ್ವಾಮೀಜಿ ವಾಣಿ ನಾವೆಲ್ಲಾ ಗಮನಿಸಬೇಕು. ವೀರಶೈವ ಲಿಂಗಾಯತ ಧರ್ಮ ಸಕಲರಿಗೂ ಒಳಿತನ್ನೇ ಬಯಸಿದೆ ಎಂದರು.

ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ‘ಭೌತಿಕ ಜೀವನ ಸಮೃದ್ಧಗೊಂಡಂತೆ ಆಂತರಿಕ ಬದುಕು ಪರಿಶುದ್ಧವಾಗಬೇಕು. ಧರ್ಮದ ದಿಕ್ಸೂಚಿ ಇಲ್ಲದೇ ಹೋದರೆ ಮಾನವ ಜೀವನ ನಿರರ್ಥಕ. ವೀರಶೈವರು ಲಿಂಗಾಯತರು ಒಂದಾಗಿ ಬಾಳಿದರೆ ಧರ್ಮಕ್ಕೆ ಉಜ್ವಲ ಭವಿಷ್ಯವಿದೆ’ ಎಂದು ತಿಳಿಸಿದರು.

ದೊಡ್ಡಗುಣಿ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಡರಾದ ವಿನಯ ಬಿದಿರೆ, ಎಚ್.ಎನ್.ಚಂದ್ರಶೇಖರ್, ವಿ.ಎಸ್.ಶಶಿಧರ್, ಟಿ.ಎ.ದಕ್ಷಿಣಾಮೂರ್ತಿ, ನವೀನ ನಾಯಕ, ಬಿ.ಎಚ್.ಪಂಚಾಕ್ಷರಯ್ಯ, ಟಿ.ಆರ್.ಸದಾಶಿವಯ್ಯ, ಟಿ.ಎಸ್.ಕರುಣಾರಾಧ್ಯ ಇತರರು ಹಾಜರಿದ್ದರು.