ADVERTISEMENT

ತುಮಕೂರು: ಪೌರತ್ವ ಕಾಯ್ದೆ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 7:40 IST
Last Updated 7 ಜನವರಿ 2020, 7:40 IST
ತುಮಕೂರಿನಲ್ಲಿ ಪೌರತ್ವ ಕಾಯ್ದೆ ಜಾಗೃತಿ ಜಾಥಾ ಮಂಗಳವಾರ ನಡೆಯಿತು.
ತುಮಕೂರಿನಲ್ಲಿ ಪೌರತ್ವ ಕಾಯ್ದೆ ಜಾಗೃತಿ ಜಾಥಾ ಮಂಗಳವಾರ ನಡೆಯಿತು.   

ತುಮಕೂರು: ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸಲೆಂದುರಾಷ್ಟ್ರೀಯ ನಾಗರಿಕ ವೇದಿಕೆಯ ತುಮಕೂರು ಜಿಲ್ಲಾ ಘಟಕವು ನಗರದಲ್ಲಿ ಮಂಗಳವಾರ ಜಾಥಾ ನಡೆಸಿತು.

ನಗರದ ಬಿ.ಎಚ್.ರಸ್ತೆಯಿಂದ ಆರಂಭವಾದ ಜಾಥಾ ಈಗ ಎಂ.ಜಿ.ರಸ್ತೆ, ಗುಂಚಿ ಚೌಕದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ನಡೆಸುತ್ತಿರುವ ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಸ್‌ನಿಂದಇಳಿದು ಜಾಥಾದಲ್ಲಿ ಹೆಜ್ಜೆ ಹಾಕಿದರು. ಪುರಭವನದ ಪಕ್ಕದಲ್ಲೆ ಇರುವ ಸಿದ್ಧಗಂಗಾ ಪಿಯುಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು.

ADVERTISEMENT

ಕಾರ್ಯಕರ್ತರ ಕೈಯಲ್ಲಿ ರಾಷ್ಟ್ರಧ್ವಜಗಳು, ಓಂ ಚಿಹ್ನೆಯುಳ್ಳ ತ್ರಿಕೋನಾಕಾರದ ಕೇಸರಿ ಬಣ್ಣದ ಧ್ವಜಗಳು ರಾರಾಜಿಸುತ್ತಿದ್ದವು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂಬ ಘೋಷಣೆಗಳು ಮೊಳಗಿದವು.

ಜಿಲ್ಲೆಯ ವಿವಿಧ ತಾಲ್ಲೂಕು ಮತ್ತು ತುಮಕೂರು ನಗರದ ವಿವಿಧ ಪ್ರದೇಶಗಳಿಂದ ಬಂದಿರುವ ಸಾವಿರಾರು ಜನರು ಭಾಗವಹಿಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರಿಂದ ಡ್ರೋನ್ ಕ್ಯಾಮೆರಾ ಕಣ್ಗಾವಲು ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.