ಶಿರಾ: ತಾಲ್ಲೂಕಿನ ಉಮಾಪತಿಹಳ್ಳಿಯಲ್ಲಿ ಸೋಮವಾರ ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
ಕಳ್ಳಂಬೆಳ್ಳ ಹೋಬಳಿಯ ಉಮಾಪತಿಹಳ್ಳಿಯ ಸುತ್ತಮುತ್ತಲಿನ ಜಮೀನಿನಲ್ಲಿ ಚಿರತೆ ಕಾಣಿಕೊಂಡು ರೈತರಲ್ಲಿ ಆತಂಕ ಮೂಡಿಸಿತ್ತು.
ರೈತರು ಅರಣ್ಯ ಇಲಾಖೆಯವರಿಗೆ ಚಿರತೆಯ ಬಗ್ಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಚಲನವಲನಗಳನ್ನು ಪರಿಶೀಲಿಸಿ ಬೋನು ಇರಿಸಿದ್ದರು. ಸೋಮವಾರ ರಾತ್ರಿ ಆಹಾರ ಹುಡುಕಿಕೊಂಡು ಬಂದ ಚಿರತೆ ಬೋನಿನಲ್ಲಿ ಬಿದ್ದಿದೆ.
ಬೋನಿನಲ್ಲಿ ಸೆರೆಯಾಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.