
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಮಧುಗಿರಿ: ತಾಲ್ಲೂಕಿನ ಜಡೆಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ದಂಪತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೀಮಾಂಧ್ರ ಪ್ರದೇಶದ ಮಡಕಶಿರಾ ತಾಲ್ಲೂಕಿನ ಗುಂಡಂಪಲ್ಲಿ ಗ್ರಾಮದ ಕೃಷ್ಣಾರೆಡ್ಡಿ (45) ಹಾಗೂ ಪತ್ನಿ ಜ್ಯೋತಿ (42) ಮೃತಪಟ್ಟವರು. ಪ್ರಯಾಣ ಮಾಡುತ್ತಿದ್ದ ಸಂಬಂಧಿಕರಾದ ಚಿದಂಬರರೆಡ್ಡಿ (54) ಹಾಗೂ ಅವರ ಮಗ ಮಧುಸೂದನ್ ರೆಡ್ಡಿ (17) ಅವರಿಗೆ ಗಾಯವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧುಗಿರಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.