ADVERTISEMENT

ಗುಬ್ಬಿ | ವಿಭಜಕಕ್ಕೆ ಕಾರು ಡಿಕ್ಕಿ: ಬಾಲಕಿ ಸಾವು, ನಾಲ್ವರ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 11:52 IST
Last Updated 15 ಸೆಪ್ಟೆಂಬರ್ 2024, 11:52 IST
<div class="paragraphs"><p>ಅಪಘಾತಕ್ಕೀಡಾದ ಕಾರು</p></div>

ಅಪಘಾತಕ್ಕೀಡಾದ ಕಾರು

   

ಗುಬ್ಬಿ: ತಾಲ್ಲೂಕಿನ ದೊಡ್ಡಗುಣಿ ಸಮೀಪ ದೇವರಹಟ್ಟಿ ಗೇಟ್‌ ಬಳಿಯ ಹೆದ್ದಾರಿಯಲ್ಲಿ ಭಾನುವಾರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಬಾಲಕಿ ಮೃತಪಟ್ಟಿದ್ದಾರೆ.

ಶಾಲಿನಿ (8) ಮೃತ ಬಾಲಕಿ. ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಲ್ಲೂಕಿನ ಕೆ.ಮತ್ತಿಘಟ್ಟ ಗ್ರಾಮದ ಮಲ್ಲಿಕಾರ್ಜುನ್‌ ಅವರು ಕುಟುಂಬ ಸಮೇತ ಕಾರೇಕುರ್ಚಿಯ ದೊಣಿಗಂಗಾ ಕ್ಷೇತ್ರಕ್ಕೆ ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

‘ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ಅರ್ಧಂಬರ್ಧ ಆಗಿದ್ದು, ಅಗತ್ಯ ಸೂಚನಾ ಫಲಕ ಅಳವಡಿಸಿಲ್ಲ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಸಮೀಪದಲ್ಲೇ ಎತ್ತಿನ ಹೊಳೆ ನಾಲಾ ಕಾಮಗಾರಿ ನಡೆಯುತ್ತಿದ್ದರೂ ತಡೆಗೋಡೆ ನಿರ್ಮಿಸಿಲ್ಲ. ಅಪಘಾತ ಸಂಭವಿಸಿದಾಗ ಕ್ರಮದ ಭರವಸೆ ನೀಡುವ ಅಧಿಕಾರಿಗಳು ನಂತರ ಇತ್ತ ಸುಳಿಯುವುದಿಲ್ಲ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.