ಅಪಘಾತ –ಪ್ರಾತಿನಿಧಿಕ ಚಿತ್ರ
ಕೊರಟಗೆರೆ: ತಾಲ್ಲೂಕಿನ ತಂಗನಹಳ್ಳಿ ಗೇಟ್ ಬಳಿ ಮಂಗಳವಾರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಮಧುಗಿರಿ ತಾಲ್ಲೂಕು ದೊಡ್ಡಹೊಸಹಳ್ಳಿ ಗ್ರಾಮದ ರವಿಕುಮಾರ್ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರವಿಕುಮಾರ್ ತನ್ನ ಪತ್ನಿ ಸುಮಾ ಹಾಗೂ ಇಬ್ಬರು ಪುಟ್ಟ ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಬೆಂಗಳೂರು ಕಡೆ ಹೋಗುವಾಗ ತಂಗನಹಳ್ಳಿ ಗೇಟ್ ಬಳಿ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದೆ.
ಸುಮಾ (28) ಅವರ ಎರಡೂ ಕಾಲುಗಳು ಮುರಿದಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. 9 ವರ್ಷದ ಗಂಡು ಮಗು ಹಾಗೂ 7 ವರ್ಷದ ಹೆಣ್ಣು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಿಪಿಐ ಆರ್.ಪಿ.ಅನಿಲ್, ಪಿಎಸ್ಐ ರೇಣುಕಾ ಯಾದವ್ ಭೇಟಿ ನೀಡಿದ್ದರು. ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.