ADVERTISEMENT

ನಕಲಿ PhD ಪದವಿ ಪ್ರಮಾಣ ಪತ್ರ ಸಲ್ಲಿಕೆ: ತುಮಕೂರಿನ ಪ್ರಾಂಶುಪಾಲರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 14:38 IST
Last Updated 22 ನವೆಂಬರ್ 2023, 14:38 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ತುಮಕೂರು: ನಕಲಿ ಪಿಎಚ್‌.ಡಿ ಪದವಿ ಪ್ರಮಾಣ ಪತ್ರ ಸಲ್ಲಿಸಿ ಪ್ರಾಂಶುಪಾಲರ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪದ ಮೇರೆಗೆ ನಗರದ ಶಿರಾಗೇಟ್ ರಸ್ತೆಯ ಕೆಎಸ್‌ಇಎಫ್‌ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಬಿ.ಸುಕನ್ಯಾ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶದ ಬುಂದೇಲಖಂಡ ವಿಶ್ವವಿದ್ಯಾಲಯದಿಂದ ಶಿಕ್ಷಣ ಶಾಸ್ತ್ರದ ವಿಷಯದಲ್ಲಿ ಪಿಎಚ್‌ಡಿ ಪಡೆದಿರುವುದಾಗಿ ಕಾಲೇಜಿನ ಆಡಳಿತ ಮಂಡಳಿಗೆ ಪದವಿ ಪ್ರಮಾಣ ಪತ್ರ ನೀಡಿ ಪ್ರಾಂಶುಪಾಲರ ಹುದ್ದೆಗೆ ಆಯ್ಕೆಯಾಗಿದ್ದರು. ವಿ.ವಿಯಲ್ಲಿ ವಿಚಾರಿಸಿದಾಗ ಇದು ಸುಳ್ಳು ಎಂದು ಗೊತ್ತಾಗಿದೆ. ಮೋಸ ಮಾಡಿ ಪ್ರಾಂಶುಪಾಲರ ಹುದ್ದೆ ಪಡೆದ ಸುಕನ್ಯಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಕೀಲ ಲಕ್ಷ್ಮಯ್ಯ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.