ADVERTISEMENT

ತಿಪಟೂರು| ಜಾತಿ ಗಣತಿ ನಡೆಸಲು 640 ಶಿಕ್ಷಕರಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 7:04 IST
Last Updated 19 ಸೆಪ್ಟೆಂಬರ್ 2025, 7:04 IST
ತಿಪಟೂರಿನಲ್ಲಿ ಶಿಕ್ಷಕರಿಗೆ ಜಾತಿ ಗಣತಿ ತರಬೇತಿ ಕಾರ್ಯಾಗಾರ ನಡೆಯಿತು 
ತಿಪಟೂರಿನಲ್ಲಿ ಶಿಕ್ಷಕರಿಗೆ ಜಾತಿ ಗಣತಿ ತರಬೇತಿ ಕಾರ್ಯಾಗಾರ ನಡೆಯಿತು    

ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ತಾಲ್ಲೂಕಿನಲ್ಲಿ 64,398 ಕುಟುಂಬಗಳಿದ್ದು, 640 ಶಿಕ್ಷಕರಿಗೆ ಸಮೀಕ್ಷೆಯ ತರಬೇತಿ ನೀಡಲಾಯಿತು.

ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಎಲ್ಲ ಸಮೀಕ್ಷಾದಾರರು ತಾಳ್ಮೆಯಿಂದ ಪ್ರತಿ ಮನೆಗೆ ತೆರಳಿ ಈಗಾಗಲೇ ಅಡಕವಾಗಿರುವ ಪ್ರಶ್ನಾವಳಿಗಳ ಮೂಲಕ ಮಾಹಿತಿ ಪಡೆಯಬೇಕು. ಸಮೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯ ಎಂದು ತಿಳಿಸಿದರು.

ADVERTISEMENT

ಉಪವಿಭಾಗಾಧಿಕಾರಿ ಸಪ್ತಶ್ರೀ ಮಾತನಾಡಿ, ಶಿಕ್ಷಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಕೇಳಿರುವ ಪ್ರಶ್ನಾವಳಿಯಲ್ಲಿ ಕುಟುಂಬದ ಮುಖ್ಯಸ್ಥನಿಂದ ಸಮಗ್ರ ಮಾಹಿತಿ ಪಡೆಯಬೇಕು. ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯಬಾರದು ಎಂದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್.ಎಂ. ಸುದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ, ಗ್ರೇಡ್–2 ತಹಶೀಲ್ದಾರ್ ಜಗನ್ನಾಥ್, ಬಿಆರ್‌ಪಿ ಉಮೇಶ್‌ಗೌಡ, ಬಿಆರ್‌ಸಿ ಕಚೇರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಕ್ಷಿಣಮೂರ್ತಿ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.