ತುರುವೇಕೆರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಅಧಿಕಾರಿ ಹಾಗೂ ಕೆಲವು ಸದಸ್ಯರ ವಿರುದ್ಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಶನಿವಾರ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಸಾಲ ವಸೂಲು ಮಾಡುು ಬಂದಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸಿಬ್ಬಂದಿ ಜಾತಿ ಹೆಸರಿನಲ್ಲಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ತಾಲ್ಲೂಕಿನ ಮಾಚೇನಹಳ್ಳಿಯ ಮಂಜುಳ ಎಂಬುವರು ದಂಡಿನಶಿವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಳಿಕಾಂಬ ಸಂಘದ ಸದಸ್ಯರಾಗಿದ್ದ ಮಂಜುಳಾ, ಸಂಘದಲ್ಲಿ ಸಾಲ ಪಡೆದಿದ್ದರು. ಸಾಲ ಮರುಪಾವತಿ ವಿಚಾರವಾಗಿ ಮಂಜುಳಾ ಮತ್ತು ಸಂಘದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು.
ದಂಡಿನಶಿವರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ತೆರಳಿದಾಗ ಯೋಜನಾಧಿಕಾರಿ ಶೇಖರ್ ಶೆಟ್ಟಿ ಮತ್ತು ಮಧು ಎನ್ನುವರು ಪೊಲೀಸ್ ಠಾಣೆ ಬಳಿ ನನ್ನ ಜಾತಿ ಹಿಡಿದು ನಿಂದಿಸಿದರು ಎಂದು ಮಂಜುಳಾ ಹೇಳಿದ್ದಾರೆ. ಈ ಸಂಬಂಧ ಐವರ ವಿರುದ್ಧ ಜಾತಿ ನಿಂದನೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.