ADVERTISEMENT

ಕಚೇರಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಎ.ಸಿ ಅಜಯ್‌: ನಾಗರಿಕರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:40 IST
Last Updated 20 ಸೆಪ್ಟೆಂಬರ್ 2022, 5:40 IST
ತುಮಕೂರಿನ ಉಪ ವಿಭಾಗಾಧಿಕಾರಿ ವಿ. ಅಜಯ್‌ ತಮ್ಮ ಕಚೇರಿಯಲ್ಲಿ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ
ತುಮಕೂರಿನ ಉಪ ವಿಭಾಗಾಧಿಕಾರಿ ವಿ. ಅಜಯ್‌ ತಮ್ಮ ಕಚೇರಿಯಲ್ಲಿ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ   

ತುಮಕೂರು: ಉಪ ವಿಭಾಗಾಧಿಕಾರಿವಿ. ಅಜಯ್‌ ಕಚೇರಿಯ ಸಮಯದಲ್ಲಿ, ತಮ್ಮ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೋಮವಾರ ಕಚೇರಿಗೆ ಭೇಟಿ ನೀಡಿದ್ದ ಸಾರ್ವಜನಿಕರನ್ನು ಹೊರಗಡೆ ಕಾಯುವಂತೆ ಮಾಡಿ, ತಲೆಗೆ ಪೇಟ ತೊಟ್ಟು, ಹಾರ ಹಾಕಿಸಿಕೊಂಡು ಕೇಕ್‌ ಕತ್ತರಿಸಿದ್ದಾರೆ. ಅಜಯ್‌ ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಉನ್ನತ ಸ್ಥಾನದಲ್ಲಿರುವ ಅಧಿಕಾರಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಕರ್ತವ್ಯ ಲೋಪ ಎಸಗಿದ್ದಾರೆ. ಕಾನೂನು ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ ಎಂದೂಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.