ADVERTISEMENT

ಅಲ್ಪಸಂಖ್ಯಾತ ಸಮುದಾಯಕ್ಕೆ ಕೇಂದ್ರ ಸರ್ಕಾರ ಯೋಜನೆ ಜಾಗೃತಿ

ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ನೇತೃತ್ವದಲ್ಲಿ ಆಯೋಜಿಸಿದ್ಧ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 15:47 IST
Last Updated 12 ಜುಲೈ 2019, 15:47 IST
ಕಾರ್ಯಾಗಾರದಲ್ಲಿ ತುಮಕೂರಿನ ಮುಸ್ಲಿಂ ಸಮುದಾಯದ ಮುಖಂಡರಾದ ಸುಲ್ತಾನ್ ಅವರು ಮಾತನಾಡಿದರು. ದೆಹಲಿಯ ರಾಕೇಶ್ ರಾಣಾ ಇದ್ದರು
ಕಾರ್ಯಾಗಾರದಲ್ಲಿ ತುಮಕೂರಿನ ಮುಸ್ಲಿಂ ಸಮುದಾಯದ ಮುಖಂಡರಾದ ಸುಲ್ತಾನ್ ಅವರು ಮಾತನಾಡಿದರು. ದೆಹಲಿಯ ರಾಕೇಶ್ ರಾಣಾ ಇದ್ದರು   

ತುಮಕೂರು: ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಏಳಿಗೆಗೆ ರೂಪಿಸಿದ ಯೋಜನೆಗಳ ಕುರಿತು ಜಾಗೃತಿ ಕಾರ್ಯಾಗಾರವನ್ನು ನಗರದ ಸದಾಶಿವನಗರದ ಅನಾಥಾಶ್ರಮದಲ್ಲಿ ಬುಧವಾರ ಮತ್ತು ಗುರುವಾರ ನಡೆಸಲಾಯಿತು.

ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆ, ಹೊಸಪೇಟೆಯ ಕೃಷ್ಣ ಸಾಯಿ ಎಜುಕೇಷನ್ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ, ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಉದ್ಯೋಗ, ಶಿಕ್ಷಣಕ್ಕೆ ಸಂಬಂಧಪಟ್ಟಂತೆ ತರಬೇತಿ, ವ್ಯಾಪಾರಕ್ಕೆ ಪ್ರೋತ್ಸಾಹ ಹೀಗೆ ವಿವಿಧ ರೀತಿಯ ಯೋಜನೆಗಳ ಬಗ್ಗೆ ಟ್ರಸ್ಟ್‌ನ ಪ್ರತಿನಿಧಿಗಳು ಮಾಹಿತಿ ನೀಡಿದರು.

ADVERTISEMENT

ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕವಾಗಿ ಹಿಂದುಳಿದಿವೆ. ಇತರ ವರ್ಗಗಳಂತೆಯೇ ಈ ಸಮುದಾಯವೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಚೇತರಿಕೆ ಹೊಂದಲು ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯವು ಉಪಯುಕ್ತ ಯೋಜನೆ ರೂಪಿಸಿದೆ. ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಟ್ರಸ್ಟ್‌ ಸದಸ್ಯರಾದ ಆದಿತ್ಯ ವಿಕ್ರಮ್‌ಜಿತ್‌ಸಿಂಗ್, ದೆಹಲಿಯ ರಾಕೇಶ್ ರಾಣಾ, ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯ ಮಾಹಿತಿ ಕೇಂದ್ರದ ಸಿಬ್ಬಂದಿ ಸಾದತ್, ನೂರುಲ್ಲಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.