ADVERTISEMENT

ಪಾವಗಡ: ತುಂಗಭದ್ರಾ, ಜೆಜೆಎಂ ಕಾಮಗಾರಿ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 13:59 IST
Last Updated 4 ಜೂನ್ 2025, 13:59 IST
ಪಾವಗಡ ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗಿರುವ ತುಂಗಭದ್ರಾ ಕುಡಿಯುವ ನೀರಿನ ಸಂಗ್ರಹಣಾ ಘಟಕ, ಜಲಜೀವನ್ ಮಿಷನ್ ಕಾಮಗಾರಿಗಳನ್ನು ಕೇಂದ್ರ ತಂಡ ಪರಿಶೀಲಿಸಿತು 
ಪಾವಗಡ ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗಿರುವ ತುಂಗಭದ್ರಾ ಕುಡಿಯುವ ನೀರಿನ ಸಂಗ್ರಹಣಾ ಘಟಕ, ಜಲಜೀವನ್ ಮಿಷನ್ ಕಾಮಗಾರಿಗಳನ್ನು ಕೇಂದ್ರ ತಂಡ ಪರಿಶೀಲಿಸಿತು    

ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಬಳಿ ನಿರ್ಮಾಣವಾಗಿರುವ ತುಂಗಭದ್ರಾ ಕುಡಿಯುವ ನೀರಿನ ಸಂಗ್ರಹಣಾ ಘಟಕ, ಜಲಜೀವನ್ ಮಿಷನ್ ಕಾಮಗಾರಿಗಳನ್ನು ಕೇಂದ್ರ ತಂಡ ಪರಿಶೀಲಿಸಿತು.

ಕೇಂದ್ರದ ಮುಖ್ಯ ಎಂಜಿನಿಯರ್ ಪ್ರೀತಮ್ ದತ್ತ, ಐಎಎಸ್ ಅಧಿಕಾರಿ ಸೌದತ್ತ ಮುಖರ್ಜಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಕಾಮಗಾರಿಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ನೀರಿನ ಸಂಗ್ರಹಣೆ, ಶುದ್ಧೀಕರಣ, ಪೂರೈಕೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ಮಾತನಾಡಿ, ‘ತಾಲೂಕಿನಲ್ಲಿ ಜೆ.ಜೆ.ಎಂ ಯೋಜನೆ ಬಹುತೇಕ ಪೂರ್ಣಗೊಂಡಿದೆ. ಸಣ್ಣಪುಟ್ಟ ಕಾಮಗಾರಿಗಳು ಪ್ರಗತಿಯಲ್ಲಿವೆ. ಎಲ್ಲ ಕಾಮಗಾರಿಗಳೂ ಪೂರ್ಣಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ನಡೆಸಲಾಗುವುದು ಎಂದು ತಿಳಿಸಿದರು.

ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಕೂಲಿ ಕಾರ್ಮಿಕರಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಧಿಕಾರಿಗಳಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಗಮನ ಹರಿಸಲಾಗಿದ್ದು, ಈ ಬಗ್ಗೆ ಸಮಗ್ರ ಮಾಹಿತಿ ಪಡೆದು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಉಪ ಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ, ಸಹಾಯಕ ನಿರ್ದೇಶಕ ಮಾರುತಿ, ಕಾವ್ಯ, ಸಹಾಯಕ ಎಂಜಿನಿಯರ್ ಬಸವಲಿಂಗಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.