ADVERTISEMENT

ಗುಬ್ಬಿ | ಇಳುವರಿಗೆ ಅದ್ಯತೆ, ಗುಣಮಟ್ಟ ಕಡೆಗಣನೆ: ಎಸ್.ಆರ್. ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 7:09 IST
Last Updated 17 ಅಕ್ಟೋಬರ್ 2025, 7:09 IST
ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಪೋಷಣ್ ಅಭಿಯಾನ ನಡೆಯಿತು
ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಪೋಷಣ್ ಅಭಿಯಾನ ನಡೆಯಿತು   

ಗುಬ್ಬಿ: ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ಚೇಳೂರಿನಲ್ಲಿ ನಡೆದ ಪೋಷಣ್ ಅಭಿಯಾನದಲ್ಲಿ ಮಾತನಾಡಿದರು.

ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಹೆಚ್ಚಿನ ಪೋಷಕಾಂಶ ಅಗತ್ಯವಿದ್ದು, ಸಾವಯವ ಪದ್ಧತಿಯಲ್ಲಿ ಬೆಳೆಯುವ ಹಣ್ಣು ತರಕಾರಿಗಳನ್ನು ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಈ ಹಿಂದೆ ಕೊಟ್ಟಿಗೆ ಗೊಬ್ಬರ ಬಳಸಿ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತಿತ್ತು. ಆದರೆ ಇತ್ತೀಚಿಗೆ ಇಳುವರಿಗೆ ಆದ್ಯತೆ ನೀಡಿ ಗುಣಮಟ್ಟವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.

ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆ ಡಿ.ಡಿ. ಸಿದ್ದರಾಮಣ್ಣ ಮಾತನಾಡಿ, ಗರ್ಭಿಣಿಯರು, ತಾಯಂದಿರು ಜಂಕ್ ಫುಡ್ ಆಸೆಗೆ ಆರೋಗ್ಯ ಹಾಳು ಮಾಡಿಕೊಳ್ಳದೆ, ಮನೆಯಲ್ಲಿಯೇ ತಯಾರಿಸುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ತಾಲ್ಲೂಕು ಆರೋಗ್ಯಧಿಕಾರಿ ಬಿಂಧು ಮಾಧವ್ ಮಾತನಾಡಿ, ಹಣದಿಂದ ಆರೋಗ್ಯ ಕೊಂಡುಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ಗುಣಮಟ್ಟದ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಅನೇಕ ರೋಗಗಳ ತಡೆಗಟ್ಟಲು ಸಾಧ್ಯ ಎಂದರು.

ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ ನಡೆಯಿತು. ಸಿಡಿಪಿಒ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ನಿರೂಪಣಾಧಿಕಾರಿ ಅಂಬಿಕಾ, ವೃತ್ತದ ಮೇಲ್ವಿಚಾರಕ್ಕೆ ನೇತ್ರಾವತಿ, ಚೇಳೂರು ಶಿವನಂಜಯ್ಯ, ರಂಗ ರಾಮಯ್ಯ, ಅಂಗನವಾಡಿ ಕಾರ್ಯಕರ್ತರು, ಮಕ್ಕಳು, ಪೋಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.