ADVERTISEMENT

ಶಿವಕುಮಾರ ಸ್ವಾಮೀಜಿ ನಾಡಿಗೆ ಸ್ಫೂರ್ತಿ: ಡಿಸಿಎಂ ಅಶ್ವತ್ಥ ನಾರಾಯಣ 

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 6:46 IST
Last Updated 21 ಜನವರಿ 2021, 6:46 IST
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮ
ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮ   

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದಾರೆ.

11ಕ್ಕೆ ಕಾರ್ಯಕ್ರಮ ನಿಗದಿ ಆಗಿತ್ತು. 10. 30ಕ್ಕೆ ಮಠಕ್ಕೆ ಬಂದ ಅವರು, ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ನೇರವಾಗಿ ವೇದಿಕೆಗೆ ಬಂದರು.

ಸಿದ್ಧಲಿಂಗ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ , ಕೇಂದ್ರ ಸಚಿವ ಪ್ರತಾಪ ಚಂದ್ರ ಸಾರಂಗಿ, ಸಂಸದ ಜಿ.ಎಸ್.ಬಸವರಾಜು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಇದ್ದಾರೆ.

ADVERTISEMENT

ಬಡ ಮಕ್ಕಳಿಗೆ ಶಿಕ್ಷಣ ನೀಡಿದಶಿವಕುಮಾರ ಸ್ವಾಮೀಜಿ ನಾಡಿಗೆ ಸ್ಫೂರ್ತಿ: ಡಿಸಿಎಂ ಅಶ್ವತ್ಥ ನಾರಾಯಣ

ಎಲ್ಲ ಸಮುದಾಯಗಳ ಬಡ ಮಕ್ಕಳಿಗೆ ಶಿಕ್ಷಣವನ್ನು ಶಿವಕುಮಾರ ಸ್ವಾಮೀಜಿ ನೀಡಿದರು. ಅವರು ಎಂದಿಗೂ ನಾಡಿಗೆ ಸ್ಫೂರ್ತಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದರು.

ಅವರಿಗೆ ಗೌರವ ತರುವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬೇಕು. ಅವರು ಬೆಳೆಸಿದ ಹಲವರು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ.

ಸ್ವಾಮೀಜಿ ಅವರ ಹುಟ್ಟೂರು ವೀರಾಪುರದಲ್ಲಿ ಅವರ 111 ಅಡಿ ಪ್ರತಿಮೆ ಸ್ಥಾಪನೆಗೆ ಕ್ರಮವಹಿಸುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ವಾಮೀಜಿ ಅವರ ವಿಚಾರಗಳನ್ನು ಅಳವಡಿಸಿಕೊಳ್ಳುತ್ತೇವೆ ಮತ್ತು ಅವರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.