
ಪ್ರಜಾವಾಣಿ ವಾರ್ತೆ
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ವಡೇರಹಳ್ಳಿ ಗ್ರಾಮದಲ್ಲಿ ಮಂಗಳವಾರ ವಿದ್ಯುತ್ ಕಂಬದ ಮೇಲೆ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಕೆಳಕ್ಕೆ ಬಿದ್ದು ಲೈನ್‌ಮ್ಯಾನ್ ಗೋಕಾಕ್‌ನ ಹನುಮಂತ ಜಾಲಿಕಟ್ಟೆ (29) ಮೃತಪಟ್ಟಿದ್ದಾರೆ.
ಕಂಬದ ಮೇಲೆ ಕೆಲಸ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿದ ಪರಿಣಾಮ ಹನುಮಂತ್ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಈ ಅವಘಡಕ್ಕೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಕಂಬದ ಮೇಲೆ ಕೆಲಸ ಮಾಡುವ ಮೊದಲು ವಿದ್ಯುತ್ ಸಂಪರ್ಕವನ್ನು ಸರಿಯಾಗಿ ಕಡಿತಗೊಳಿಸದಿರುವುದು ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ ಎಂದು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.