
ಪ್ರಜಾವಾಣಿ ವಾರ್ತೆ
ಚಿಕ್ಕನಾಯಕನಹಳ್ಳಿ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ವಾಣಿಜ್ಯ ಶೆಡ್ ಅನ್ನು ಸೋಮವಾರ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬರು ಹಾಲಿನ ಡೇರಿ ಹಾಗೂ ಹಾಲಿನ ಉತ್ಪನ್ನಗಳ ಮಾರಾಟದ ಉದ್ದೇಶದಿಂದ ಸಾರ್ವಜನಿಕ ಓಡಾಟದ ಪಾದಚಾರಿ ಮಾರ್ಗದಲ್ಲಿ ಏಕಾಏಕಿ ಶೆಡ್ ನಿರ್ಮಿಸಿದ್ದರು. ಭಾನುವಾರ ರಜೆ ಇರುವುದನ್ನು ಬಳಸಿಕೊಂಡು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಕೈಗೊಂಡಿದ್ದ ಈ ಅಕ್ರಮ ನಿರ್ಮಾಣದ ವಿರುದ್ಧ ಸಾರ್ವಜನಿಕರು ಹಾಗೂ ಸ್ಥಳೀಯ ಟ್ಯಾಕ್ಸಿ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.