ADVERTISEMENT

ತುಮಕೂರು: ರೈಲಿನಲ್ಲಿ ಬಾಲಕಿಗೆ ಕಿರುಕುಳ; 5 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 6:26 IST
Last Updated 8 ಜನವರಿ 2026, 6:26 IST
(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)   

ತುಮಕೂರು: ಚಲಿಸುತ್ತಿದ್ದ ರೈಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಿ.ಎ.ಸತ್ಯ ಅಲಿಯಾಸ್‌ ಮೊಟ್ಟೆ (28) ಎಂಬಾತನಿಗೆ ಪೋಕ್ಸೊ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, ₹2 ಸಾವಿರ ದಂಡ ವಿಧಿಸಿದೆ.

ಅಪರಾಧಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ನಿವಾಸಿ. ಬಾಲಕಿ ರೈಲಿನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದರು. ಇದೇ ರೈಲಿನಲ್ಲಿದ್ದ ಸತ್ಯ ಬಾಲಕಿಗೆ ಕಿರುಕುಳ ನೀಡಿದ್ದ. ಅರಸೀಕೆರೆ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಮೈಸೂರು ವೃತ್ತದ ರೈಲ್ವೆ ಇನ್‌ಸ್ಪೆಕ್ಟರ್‌ ಎಲ್‌.ಶ್ರೀನಿವಾಸ್‌ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್‌ ಎಸ್‌.ಹೆಳವರ ಅವರು ಪ್ರಕರಣದ ಕುರಿತು ವಿಚಾರಣೆ ನಡೆಸಿದರು. ಅಪರಾಧಿ ವಿರುದ್ಧ ಆರೋಪ ಸಾಬೀತಾದ ಕಾರಣ ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ₹53 ಸಾವಿರ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಣಮಂತರಾಯ ತಳಕೇರಿ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.