ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 10:03 IST
Last Updated 13 ಜೂನ್ 2020, 10:03 IST

ಕೊರಟಗೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯ ಮಗಳ‌ ಮೇಲೆ ತೋಟ ನಿರ್ವಹಣೆ ‌ನೋಡಿಕೊಳ್ಳುತ್ತಿದ್ದ ವ್ಯಕ್ತಿ ಒಂದು ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು ತಿಳಿದು ಆಕೆಯ ತಂದೆಯನ್ನು ಬೆದರಿಸಿ ಕೆಲಸ ಬಿಡಿಸಿದ್ದಾನೆ. ಕೆಲಸ ಬಿಟ್ಟ ವ್ಯಕ್ತಿ ಹಾಗೂ ಬಾಲಕಿ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ತೋಟದ ಕೆಲಸಕ್ಕೆ ಸೇರಿದ್ದರು.

ಈ ವೇಳೆ ಬಾಲಕಿ ಗರ್ಭಿಣಿಯಾಗಿರುವ ಮಾಹಿತಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಗೆ ತಿಳಿದಿದೆ. ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೂನ್ 10ರಂದು ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಕೊರಟಗೆರೆ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಿಪಿಐ ಎಫ್.ಕೆ.ನದಾಫ್, ಪಿಎಸ್ಐ ಎಚ್.ಮುತ್ತುರಾಜು ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.