ಚಿಕ್ಕನಾಯಕನಹಳ್ಳಿ: ನಾಲ್ಕು ದಿನದ ಹಿಂದೆ ತಾಲ್ಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಲಾಗಿದೆ.
ಆಗಸ್ಟ್ 30ರಂದು ಬೆಳಗ್ಗೆ ಕಾಲೇಜಿಗೆ ಹೋದ ಬಾಲಕಿ ಸಂಜೆಯಾದರೂ ಮನೆಗೆ ಮರಳದ ಕಾರಣ ಪೋಷಕರು ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಆಗಸ್ಟ್ 31ರಂದು ಮಧ್ಯಾಹ್ನ ಹಂದನಕೆರೆ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ಈ ವೇಳೆ ಬಾಲಕಿ ಮನೆಗೆ ಮರಳಿದ್ದಾಳೆ.
ಗ್ರಾಮದ ಪರಿಚಿತ ಯುವಕನೊಬ್ಬ ತನ್ನ ಅಣ್ಣನ ಮನೆಗೆ ಕರೆದುಕೊಂಡು ಹೋಗಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಪೋಕ್ಸೊ ಕಾಯ್ದೆ ಅಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.