ADVERTISEMENT

ಶಿರಾ: ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತ

ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 4:19 IST
Last Updated 17 ಮೇ 2022, 4:19 IST
ಶಿರಾ ತಾಲ್ಲೂಕಿನ ಗಾಣದಹುಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು
ಶಿರಾ ತಾಲ್ಲೂಕಿನ ಗಾಣದಹುಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು   

ಶಿರಾ: ತಾಲ್ಲೂಕಿನಲ್ಲಿ ಸೋಮವಾರದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳ ಕಲರವ ಆರಂಭ
ವಾಗಿದೆ.

ಚಿಣ್ಣರಲ್ಲಿ ಒಂಥರಾ ಹೊಸತನ, ಸಡಗರ ಮನೆ ಮಾಡಿದೆ. ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯ ಸಂತಸದಲ್ಲಿದ್ದ ಅವರು ಇಂದು ಶಾಲಾ ಅಂಗಳಕ್ಕೆ ಕಾಲಿಟ್ಟು, ಗೆಳೆಯರ ಜತೆ ಕುಣಿದು ಕುಪ್ಪಳಿಸಿದರು. ಶಾಲಾ ಆವರಣಕ್ಕೆ ಆಗಮಿಸಿದ ಎಲ್ಲಾ ಮಕ್ಕಳಿಗೂ ಗುಲಾಬಿ ನೀಡುವ ಮೂಲಕ ಶಿಕ್ಷಕರು ಸ್ವಾಗತಿಸಿದರು.

ಕೊರೊನಾದಿಂದ ಕಳೆದ ಎರಡು ವರ್ಷ ಶಾಲೆಗಳು ಸಮಯಕ್ಕೆ‌ ಸರಿಯಾಗಿ ಪ್ರಾರಂಭವಾಗದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿತ್ತು. ಇದನ್ನು ಸರಿದೂಗಿಸಲು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ ಎಲ್ಲಾ ಶಾಲೆಗಳ 1ರಿಂದ 9ನೇ ತರಗತಿ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ.

ADVERTISEMENT

ದಾಖಲಾತಿ ಆಂದೋಲನಾ ಜಾಥಾ ಹಮ್ಮಿಕೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಕ್ಕಳೊಂದಿಗೆ ಸಂಚರಿಸಿದರು. ಶಿಕ್ಷಣದ ಮಹತ್ವ ಸಾರುವ ಹಾಡು ಹಾಡುತ್ತಾ ಘೋಷಣೆಗಳನ್ನು ಕೂಗಿದರು. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲು ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಗಾಣದಹುಣಸೆ ಗ್ರಾಮದಲ್ಲಿ ನಡೆದ ಜಾಗೃತಿ ಜಾಥಾದಲ್ಲಿ ನೇರಲಗುಡ್ಡ ಕ್ಲಸ್ಟರ್ ಸಿಆರ್‌ಪಿ ಜಯಣ್ಣ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ನರಸಿಂಹಮೂರ್ತಿ, ಸಹಶಿಕ್ಷಕರಾದ ಮಹಮ್ಮದ್ ಗೌಸ್, ಷಂಷೀರ್ ಬೇಗ್, ಆರ್. ತಿಪ್ಪೇಸ್ವಾಮಿ, ಎಸ್‌ಡಿಎಂಸಿ ಉಪಾಧ್ಯಕ್ಷ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.