ADVERTISEMENT

ತುಮಕೂರು | ಮಕ್ಕಳ ಬದುಕೇ ಸವಾಲು: ಶಿವಾನಂದ ಶಿವಾಚಾರ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2023, 7:39 IST
Last Updated 29 ನವೆಂಬರ್ 2023, 7:39 IST
<div class="paragraphs"><p>ತುಮಕೂರಿನಲ್ಲಿ ಮಂಗಳವಾರ&nbsp;ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪರಿಷತ್ ವತಿಯಿಂದ ರಾಜ್ಯೋತ್ಸವ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸ್ವಾಮಿ ಜಪಾನಂದಜೀ, ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಮೊದಲಾದವರು ಉಪಸ್ಥಿತರಿದ್ದರು</p></div>

ತುಮಕೂರಿನಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪರಿಷತ್ ವತಿಯಿಂದ ರಾಜ್ಯೋತ್ಸವ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸ್ವಾಮಿ ಜಪಾನಂದಜೀ, ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಮೊದಲಾದವರು ಉಪಸ್ಥಿತರಿದ್ದರು

   

ತುಮಕೂರು: ಪ್ರಸ್ತುತ ಸನ್ನಿವೇಶ ಗಮನಿಸಿದರೆ ಸಮಾಜದಲ್ಲಿ ಉತ್ತಮ ವಾತಾವರಣ ಇಲ್ಲವಾಗಿದ್ದು, ಮಕ್ಕಳು ಉತ್ತಮ ಪ್ರಜೆಗಳಾಗಿ ಬಾಳುವುದೇ ಸವಾಲಿನ ಕೆಲಸವಾಗಿದೆ ಎಂದು ಹಿರೇಮಠದ ಅಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಮಂಗಳವಾರ ಹಮ್ಮಿಕೊಂಡಿದ್ದ ಪರಿಷತ್ತಿನ ರಾಜ್ಯೋತ್ಸವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ADVERTISEMENT

ಸೌಲಭ್ಯಗಳು ಹೇರಳವಾಗಿವೆ. ಬೇಕಾದನ್ನು ಪಡೆಯಬಹುದಾಗಿದೆ. ಆದರೆ ಸಂಸ್ಕೃತಿ ಮರೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಒಳ್ಳೆಯದನ್ನು ತಿಳಿಸುವ, ಕಲಿಸುವ ಹೊಣೆಗಾರಿಕೆ ಹಿರಿಯರ ಮೇಲಿದೆ ಎಂದು ಸಲಹೆ ಮಾಡಿದರು.

ಪಾವಗಡದ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದಜೀ ಅವರು ಹಿರೇಮಠ ಸ್ವಾಮೀಜಿ ಕುರಿತ ‘ಜ್ಞಾನ ದಾಸೋಹಿ’ ಕವನ ಸಂಕಲನ ಬಿಡುಗಡೆ ಮಾಡಿದರು. ಎಷ್ಟೋ ವರ್ಷಗಳ ಹಿಂದೆ ಋಷಿ ಮುನಿಗಳು, ಗುರುಗಳು ರಚಿಸಿದ ಉಪನಿಷತ್ತುಗಳು ಇಂದಿಗೂ ಪ್ರಸ್ತುತವಾಗಿವೆ. ಆಗಿನ ವಚನಕಾರರು ಸಾರಿದ ವಚನಗಳು, ಅನುಭಾವದ ನುಡಿಗಳು ಸಾರ್ವಕಾಲಿಕ ಸಂದೇಶಗಳಾಗಿ ಮಹತ್ವ ಉಳಿಸಿಕೊಂಡಿವೆ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಿ.ನಾಗಭೂಷಣ್ (ಸಾಹಿತ್ಯ ಮತ್ತು ಸಂಶೋಧನೆ), ಸೊಂದಲಗೆರೆ ಲಕ್ಷ್ಮಿಪತಿ (ಸಾಹಿತ್ಯ ಮತ್ತು ಪ್ರಕಾಶನ), ವಿಜಯಾಮೋಹನ್ (ಕಥಾ ವಿಭಾಗ), ರಂಗಮ್ಮ ಹೊದೆಕಲ್ (ಕಾವ್ಯ), ಬಿ.ಟಿ.ಕುಮಾರ್ (ಸಂಘಟನೆ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್.ಆರ್.ದೇವಪ್ರಕಾಶ್ ದತ್ತಿ ಮಾಧ್ಯಮ ಪ್ರಶಸ್ತಿಯನ್ನು ಪತ್ರಕರ್ತರಾದ ಜಗನ್ನಾಥ್ ಕಾಳೇನಹಳ್ಳಿ, ರಾಮಚಂದ್ರಯ್ಯ ಅವರಿಗೆ ವಿತರಿಸಲಾಯಿತು.

ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಸಾಹಿತಿ ಕವಿತಾಕೃಷ್ಣ, ಮಾಧ್ಯಮ ದತ್ತಿನಿಧಿ ದಾನಿ ಎಸ್.ಆರ್.ದೇವಪ್ರಕಾಶ್, ಪರಿಷತ್ ಕಾರ್ಯದರ್ಶಿಗಳಾದ ಡಿ.ಎನ್.ಯೋಗೀಶ್ವರಪ್ಪ, ಕೆ.ಕಂಟಲಗೆರೆ ಸಣ್ಣಹೊನ್ನಯ್ಯ, ಕೋಶಾಧ್ಯಕ್ಷ ಎಂ.ಎಚ್.ನಾಗರಾಜು, ಜಿಲ್ಲಾ ಸಂಚಾಲಕ ಉಮಾಮಹೇಶ್ ಪಾಲ್ಗೊಂಡಿದ್ದರು. ನಂತರ ನಡೆದ ಕವಿಗೋಷ್ಠಿಯಲ್ಲಿ ಕವಿಗಳು ಕವನ ವಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.