ADVERTISEMENT

ಪರಿಸ್ಥಿತಿ ಗಂಭೀರತೆ ಅರ್ಥಮಾಡಿಕೊಳ್ಳದ ಸರ್ಕಾರ: ಮೀನಾಕ್ಷಿ ಸುಂದರಂ ಆರೋಪ

ಸೆಂಟರ್ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ ಸಂಘಟನೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 15:20 IST
Last Updated 12 ಏಪ್ರಿಲ್ 2020, 15:20 IST
ಮೀನಾಕ್ಷಿ ಸುಂದರಂ
ಮೀನಾಕ್ಷಿ ಸುಂದರಂ   

ತುಮಕೂರು: ಹಸಿವಿನಿಂದ ಬಳಲುತ್ತಿರುವ ಅಸಂಘಟಿತ ವಲಯದ ಕಾರ್ಮಿಕರು ಮತ್ತು ಬಡವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬೇಕು. ಇಲ್ಲದಿದ್ದರೆ, ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಲಿದೆ ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಅವರು ಮಾತನಾಡಿದರು.

ದೇಶದಲ್ಲಿ 130 ಕೋಟಿ ಜನಸಂಖ್ಯೆ ಇದೆ. ಆದ್ದರಿಂದ ವೈದ್ಯಕೀಯ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸೋಂಕು ವ್ಯಾಪಕವಾಗಿ ಹರಡಿರುವ ಪ್ರದೇಶವೂ ಸೇರಿದಂತೆ ಎಲ್ಲರಿಗೂ ಉಚಿತವಾಗಿ ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಔಷಧಿ ತಯಾರಿಸುವುದರಲ್ಲಿ ಸರ್ಕಾರಿ ಕಂಪನಿಗಳೂ ಸಾಧನೆ ಮಾಡಿವೆ. ಆದರೆ, ಔಷಧಿಗಳ ತಯಾರಿಕೆಯನ್ನು ಹೊಸದಾಗಿ ಆರಂಭವಾಗಿರುವ ಖಾಸಗಿ ಕಂಪನಿಗೆ ವಹಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿಯೂ ಸರ್ಕಾರ ಗಂಭೀರತೆ ಅರ್ಥಮಾಡಿಕೊಂಡಿಲ್ಲ ಎಂದು ಆರೋಪಿಸಿದರು.

ಸಿಐಟಿಯು ಮುಖಂಡ ಕೆ.ಎನ್.ಉಮೇಶ್, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಣ ಪಡೆದು ಬಿಜೆಪಿ ಶಾಸಕರು ಆಹಾರ ಸಾಮಗ್ರಿಗಳನ್ನು ವಿತರಿಸುತ್ತಿದಾರೆ. ಇದನ್ನು ಸಂಘಟನೆ ಖಂಡಿಸುತ್ತದೆ ಎಂದರು.

ವಕೀಲ ಪ್ರತಾಪ್ ಸಿಂಹ ಮಾತನಾಡಿದರು. ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್, ಕಟ್ಟಡ ಕಾರ್ಮಿಕ ಸಂಘಧ ಬಿ.ಉಮೇಶ್, ಸಿಐಟಿಯು ಎನ್.ಕೆ.ಸುಬ್ರಹ್ಮಣ್ಯ, ಖಜಾಂಚಿ ಎ.ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.