ADVERTISEMENT

ಸ್ವಚ್ಛ ಮಧುಗಿರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2023, 13:33 IST
Last Updated 14 ಆಗಸ್ಟ್ 2023, 13:33 IST
ಮಧುಗಿರಿಯ ದಂಡಿನ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ ಸ್ವಚ್ಛ ಮಧುಗಿರಿ ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಚಾಲನೆ ನೀಡಿದರು
ಮಧುಗಿರಿಯ ದಂಡಿನ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ ಸ್ವಚ್ಛ ಮಧುಗಿರಿ ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಚಾಲನೆ ನೀಡಿದರು   

ಮಧುಗಿರಿ: ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಮಧುಗಿರಿಗೆ ಮುನ್ನುಡಿ ಬರೆಯಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ದಂಡಿನ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ ಸ್ವಚ್ಛ ಮಧುಗಿರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಆಡಳಿತ ಹೆಚ್ಚು ಶ್ರಮವಹಿಸಿ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ 1,670 ವಿದ್ಯಾರ್ಥಿಗಳ ಜತೆಗೆ ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದರು.

ADVERTISEMENT

ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತನಾಡಿ, ಸ್ವಚ್ಛತೆ ಮಹಾತ್ಮ ಗಾಂಧಿಜೀ ಅವರ ಕನಸು‌. ಸರ್ಕಾರಿ ಕಚೇರಿಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಚರಂಡಿಗಳಲ್ಲಿ ನೀರಿನ‌ ಪೈಪ್‌ಲೈನ್ ಹೋಗದಂತೆ ಎಚ್ಚರ ವಹಿಸಲಾಗಿದೆ ಎಂದರು.

ಜಿ.ಪಂ ಸಿಇಒ ಪ್ರಭು ಮಾತನಾಡಿ, ಹಾಸ್ಟೆಲ್‌ಗಳಲ್ಲೂ ಶುದ್ಧ ಕುಡಿಯುವ ನೀರಿಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 8 ಲಕ್ಷ ಮಿಟರ್ ಚರಂಡಿಗಳ ಅವಶ್ಯಕತೆಯಿದ್ದು. ₹300ಕೋಟಿ ಅಂದಾಜುಪಟ್ಟಿ ಸಿದ್ದಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವರ್ಷ ₹100 ಕೋಟಿ ವೆಚ್ಚದಲ್ಲಿ ಚರಂಡಿಗಳ ನಿರ್ಮಾಣ, ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದರು.

ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌ ಶಹಪೂರವಾಡ್‌, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಉಪ ವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ಸಿಗ್ಬತ್‌ಉಲ್ಲಾ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಇಒ ಲಕ್ಷ್ಮಣ್, ಮಧುಸೂದನ್, ಪುರಸಭೆ ಮುಖ್ಯಾಧಿಕಾರಿ ನಜ್ಮಾ, ಸದಸ್ಯ ಅಲೀಮ್, ಮಂಜುನಾಥ್, ಕೆಪಿಸಿಸಿ ಸದಸ್ಯ ಎಂ.ಎಸ್. ಮಲ್ಲಿಕಾರ್ಜುನಯ್ಯ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡಯ್ಯ, ಎನ್. ಗಂಗಣ್ಣ, ಕಾಂತರಾಜು, ಬಿ.ನಾಗೇಶ್ ಬಾಬು, ಸಿದ್ದಾಪುರ ವೀರಣ್ಣ, ಟಿ.ರಾಮಣ್ಣ, ಶ್ರೀಧರ್ ಇದ್ದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.