ADVERTISEMENT

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಜಯ: ಸಂಘಟಿತ ಹೋರಾಟಕ್ಕೆ ಕನ್ನಡಿ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು; ವಿಜಯೋತ್ಸವದಲ್ಲಿ ಶಾಸಕ ಜ್ಯೋತಿ ಗಣೇಶ್ ಅಭಿಮತ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 11:48 IST
Last Updated 9 ಡಿಸೆಂಬರ್ 2019, 11:48 IST
ಸಿಹಿ ಹಂಚಿ ಸಂಭ್ರಮಿಸಿದ ಶಾಸಕ ಜ್ಯೋತಿಗಣೇಶ್ ಹಾಗೂ ಬಿಜೆಪಿ ಕಾರ್ಯಕರ್ತರು
ಸಿಹಿ ಹಂಚಿ ಸಂಭ್ರಮಿಸಿದ ಶಾಸಕ ಜ್ಯೋತಿಗಣೇಶ್ ಹಾಗೂ ಬಿಜೆಪಿ ಕಾರ್ಯಕರ್ತರು   

ತುಮಕೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ಸರ್ಕಾರ ಸುಭದ್ರವಾಗಿದೆ. ಕಾರ್ಯಕರ್ತರಿಗೆ ಸಂತಸವಾಗಿದೆ’ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.

ಉಪಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿ, ಸಂಘಟಿತ ಹೋರಾಟದಿಂದ ಬಿಜೆಪಿ ಗೆಲುವು ಸಾಧಿಸಿತು. ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿರುವುದು ಸಂಘಟಿತ ಹೋರಾಟಕ್ಕೆ ಹಿಡಿದ ಕನ್ನಡಿ ಎಂದು ತಿಳಿಸಿದರು.

ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಹೆಬ್ಬಾಕ, ಕಾರ್ಯದರ್ಶಿ ರುದ್ರೇಶ್, ಕೊಪ್ಪಳ ನಾಗರಾಜ್, ಮಹಾನಗರಪಾಲಿಕೆ ಸದಸ್ಯರಾದ ಸಿ.ಎನ್.ರಮೇಶ್, ವಿಷ್ಣುವರ್ಧನ್, ಮುಖಂಡರಾದ ಇಂದ್ರ ಕುಮಾರ್, ವೇದಮೂರ್ತಿ, ಎಂ.ಪಿ ರಮೇಶ್, ಟಿ.ಎಚ್ ಹನುಮಂತರಾಜು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.