ADVERTISEMENT

ತುಮಕೂರು | ಕ್ರಿಕೆಟ್‌ ಮೈದಾನಕ್ಕೆ ಸಿಎಂ ಶಂಕುಸ್ಥಾಪನೆ 

50 ಎಕರೆ ಭೂಮಿಯಲ್ಲಿ ತಲೆಎತ್ತಲಿರುವ ಕ್ರೀಡಾಂಗಣ; ₹150 ಕೋಟಿ ಅಂದಾಜು ವೆಚ್ಚ; ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 0:29 IST
Last Updated 3 ಡಿಸೆಂಬರ್ 2024, 0:29 IST
ತುಮಕೂರು ತಾಲ್ಲೂಕಿನ ಪಿ.ಗೊಲ್ಲಹಳ್ಳಿ ಸಮೀಪ ಸೋಮವಾರ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯಾಟ್‌ ಬೀಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಪ್ರಕಾಶ್‌ ರಾಠೋಡ್‌ ಮೊದಲಾದವರು ಪಾಲ್ಗೊಂಡಿದ್ದರು

ತುಮಕೂರು: ತಾಲ್ಲೂಕಿನ ಕೋರ ಹೋಬಳಿಯ ಪಿ.ಗೊಲ್ಲಹಳ್ಳಿ ಬಳಿ ಅಂದಾಜು ₹150 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಸುಮಾರು 50 ಎಕರೆ ವಿಸ್ತೀರ್ಣದಲ್ಲಿ ಕ್ರೀಡಾಂಗಣ ತಲೆ ಎತ್ತಲಿದ್ದು, ಮುಂದಿನ ಎರಡು ವರ್ಷದಲ್ಲಿ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ(ಕೆಎಸ್‌ಸಿಎ) ಈಗಾಗಲೇ ಭೂಮಿ ಹಸ್ತಾಂತರಿಸಲಾಗಿದೆ. 

ಕ್ರೀಡಾಂಗಣಕ್ಕೆ ಭೂಮಿಪೂಜೆ ನೆರವೇರಿಸಿ ಸಿದ್ದರಾಮಯ್ಯ ಮಾತನಾಡಿ, ‘ಮೈಸೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಕೆಎಸ್‌ಸಿಎಗೆ ಅಗತ್ಯ ಭೂಮಿ‌ ನೀಡಲಾಗುವುದು. ಇದೇ ರೀತಿ ಅಲ್ಲಿಯೂ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.