ADVERTISEMENT

ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2019, 14:01 IST
Last Updated 14 ಸೆಪ್ಟೆಂಬರ್ 2019, 14:01 IST
ಕಾರ್ಯಕ್ರಮವನ್ನು ಪ್ರಾಂಶುಪಾಲ ಜಗದೀಶ್ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಪ್ರಾಂಶುಪಾಲ ಜಗದೀಶ್ ಉದ್ಘಾಟಿಸಿದರು.   

ತುಮಕೂರು: ಶಿಕ್ಷಕ ಸಮಾಜದ ಪರಿವರ್ತಕ. ಭಗವಂತನ ದಾರಿ ತೋರುವ ಸನ್ಮಾರ್ಗಿ. ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಂಧಕಾರ ಹೋಗಲಾಡಿಸಿ ಬೆಳಕು ತೋರಿಸುವ ಸಂತ ಎಂದು ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲ ಜಿ.ಟಿ.ಜಗದೀಶ್ ಹೇಳಿದರು.

ನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯ ಉಜ್ವಲವಾಗುತ್ತದೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ತಲುಪಲು ಶ್ರಮವಹಿಸಬೇಕು ಎಂದರು.

ADVERTISEMENT

ಶಿಕ್ಷಕರ ಪಾತ್ರ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಹೇಗೆ ಪ್ರಮುಖ ಎನ್ನುವ ಕುರಿತು ಸಾಧಕರ ವಿಚಾರಗಳನ್ನು ಪ್ರಸ್ತಾಪಿಸಿ ಮಾತನಾಡಿದರು.

ನಗರದ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪ್ರಾಂಶುಪಾಲ ಬಿ.ವಿ.ಬಸವರಾಜು ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಸಿಬ್ಬಂದಿ, ಉಪನ್ಯಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.