ADVERTISEMENT

ತುಮಕೂರು: ಆಶಾ ಕಾರ್ಯಕರ್ತೆಯರಿಗೆ ₹ 3 ಸಾವಿರ ಪ್ರೋತ್ಸಾಹ ಧನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 6:36 IST
Last Updated 12 ಜೂನ್ 2020, 6:36 IST
ಸಚಿವರಾದ ಎಸ್‌.ಟಿ.ಸೋಮಶೇಖರ್, ಜೆ.ಸಿ.ಮಾಧುಸ್ವಾಮಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿದರು
ಸಚಿವರಾದ ಎಸ್‌.ಟಿ.ಸೋಮಶೇಖರ್, ಜೆ.ಸಿ.ಮಾಧುಸ್ವಾಮಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿದರು   

ತುಮಕೂರು: ಕೊರೊನಾ ಸೋಂಕು ತಡೆಗೆ ‌ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆ ನೀಡುವ ₹ 3 ಸಾವಿರ ಪ್ರೋತ್ಸಾಹ ಧನವನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಗುರುವಾರ ನಗರದಲ್ಲಿ ವಿತರಿಸಿದರು.

ಕನ್ನಡಭವನದಲ್ಲಿ ನಡೆದ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕ್, ತುಮಕೂರು ಹಾಲು ಒಕ್ಕೂಟ, ಆರೋಗ್ಯ ಇಲಾಖೆ ಸಂಘಟಿಸಿದ್ದವು.

‘ಆಶಾ ಕಾರ್ಯಕರ್ತೆಯರು 2 ತಿಂಗಳ ಕಾಲ ತಮ್ಮ ಯೋಗಕ್ಷೇಮ ಮರೆತು ಮನೆ ಮನೆಗೆ ಭೇಟಿ ಮಾಡಿ ಆರೋಗ್ಯ ಸಮೀಕ್ಷೆ ನಡೆಸಿದ್ದಾರೆ. ಸಮುದಾಯದ ಆರೋಗ್ಯವನ್ನು ಕಾಪಾಡಿದ್ದಾರೆ. ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಮೆಚ್ಚುವಂತದ್ದು ಎಂದು ಅವರು ಪ್ರಶಂಸಿಸಿದರು.

ADVERTISEMENT

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ‘ಕೊರೊನಾ ಹೋರಾಟದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಪ್ರಧಾನಿ ಲಾಕ್‍ಡೌನ್ ಘೋಷಿಸಿದರು. ಇದರಿಂದ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಜನರು ಉತ್ತಮವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ಜಿಲ್ಲೆಯ 101 ಆಶಾ ಕಾರ್ಯಕರ್ತೆಯರಿಗೆ ಪ್ರಶಂಸಾ ಪತ್ರ, ಪ್ರೋತ್ಸಾಹಧನ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಲಾಯಿತು.

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ,ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಮಹಾಲಿಂಗಪ್ಪ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್, ಉಪವಿಭಾಗಾಧಿಕಾರಿ ಅಜಯ್, ಡಿಎಚ್‍ಒ ಡಾ.ನಾಗೇಂದ್ರಪ್ಪ, ಮುಖಂಡ ಡಾ.ಹುಲಿನಾಯ್ಕರ್ ಇದ್ದರು.

₹12.7 ಕೋಟಿ ಜಮೆ: ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಮಾತನಾಡಿ, ‘ರಾಜ್ಯದಾದ್ಯಂತ 40,250 ಆಶಾ ಕಾರ್ಯಕರ್ತೆಯರು ಇದ್ದಾರೆ. ಪ್ರತಿಯೊಬ್ಬರಿಗೂ ₹ 3 ಸಾವಿರದಂತೆ ₹ 12.7 ಕೋಟಿಯನ್ನು ಸಹಕಾರ ಇಲಾಖೆ ಮೂಲಕ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ’ ಎಂದರು.

ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಕಾರ್ಯ
ಕ್ರಮ ನಡೆಯುತ್ತಿದೆ. ಇದಕ್ಕೆ ಜಿಲ್ಲಾ ಮಟ್ಟದ ಸಹಕಾರಿ ಸಂಘಗಳು, ಡೇರಿ ಇನ್ನಿತರೆ ಸಹಕಾರ ಸಂಘ
ಗಳು ಸಹಕಾರ ನೀಡುತ್ತಿವೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಶಾಕಾರ್ಯಕರ್ತೆಯರಿಗೆ ಪ್ರೋತ್ಸಾ
ಹಧನ ನೀಡಲಾಗುವುದು. ಮುಂದೆ ಉಳಿದ ಕಾರ್ಯಕರ್ತೆಯರ ಖಾತೆಗೆ ಜಮೆ ಮಾಡಲಾಗುವುದು. ಪ್ರೋತ್ಸಾಹಧನ ದೊರೆಯದವರು ಹತ್ತಿರ ಸಹಕಾರ ಬ್ಯಾಂಕ್‍ಗಳನ್ನು ಸಂಪರ್ಕಿಸುವಂತೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.