ADVERTISEMENT

ಅಕಾಲಿಕ ಮರಣ ಹೊಂದಿದ ಕೆಎಎಸ್‌ ಅಧಿಕಾರಿಗೆ ₹1 ಕೋಟಿ ಪರಿಹಾರ ನೀಡಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 11:13 IST
Last Updated 9 ಆಗಸ್ಟ್ 2020, 11:13 IST
ಸರ್ಕಾರಿ ಗೌರವಗಳೊಂದಿಗೆ ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿಯ ಅಂತ್ಯಕ್ರಿಯೆ ನೆರವೇರಿತು.
ಸರ್ಕಾರಿ ಗೌರವಗಳೊಂದಿಗೆ ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿಯ ಅಂತ್ಯಕ್ರಿಯೆ ನೆರವೇರಿತು.   

ತುರುವೇಕೆರೆ: ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ ಕೆಎಎಸ್‌ ಅಧಿಕಾರಿ ಎಚ್.ಗಂಗಾಧರಯ್ಯ ಕುಟುಂಬಸ್ತರಿಗೆ ₹1 ಕೋಟಿ ಪರಿಹಾರ ನೀಡುವಂತೆ ಶಾಸಕ ಮಸಾಲ ಜಯರಾಂ ಸರ್ಕಾರಕ್ಕೆ ಒತ್ತಾಯಿಸಿದರು.

ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಡಿ.ಹೊಸಹಳ್ಳಿ ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆದ ಅಂತ್ಯಕ್ರಿಯೆ ಸಂದರ್ಭದಲ್ಲಿ ಅವರು ಮಾತನಾಡಿದರು.

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಆರಂಭಿಸಿರುವ ಕೋವಿಡ್‌ ಆರೈಕೆ ಕೇಂದ್ರದ ನೋಡಲ್‌ ಅಧಿಕಾರಿಯಾಗಿದ್ದ ಪ್ರೊಬೇಷನರಿ ಉಪವಿಭಾಗಾಧಿಕಾರಿ ಎಚ್‌.ಎಂ.ಗಂಗಾಧರಯ್ಯ (45) ಹೃದಯಾಘಾತದಿಂದಾಗಿ ಮರಣ ಹೊಂದಿರುವುದು ದುಃಖಕರ ಸಂಗತಿ ಎಂದರು.

ADVERTISEMENT

ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯಿಂದ ತಾಲ್ಲೂಕಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ₹25 ಲಕ್ಷ ಪರಿಹಾರವನ್ನು ಈಗಾಗಲೇ ಘೋಷಿಸಿದ್ದಾರೆ. ಆದರೆ ₹1 ಕೋಟಿ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಹಾಗೂ ಇತರೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.