ADVERTISEMENT

ಅಮೂಲ್ಯಾ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2020, 10:23 IST
Last Updated 22 ಫೆಬ್ರುವರಿ 2020, 10:23 IST

ತುಮಕೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಾ ಲಿಯೋನ್ ವಿರುದ್ಧ ಇಲ್ಲಿನ ಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಎಸ್.ಸಾಧಿಕ್ ಪಾಷಾ ಶುಕ್ರವಾರ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿದ್ದಾರೆ.

ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಾಗೂ ವಿರೋಧಿಸುವ ಹಕ್ಕು ನೀಡಿದೆ. ಆದರೆ ಅಮೂಲ್ಯಾ ಈ ಹಕ್ಕನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಅಕ್ಷಮ್ಯ. ಕೂಡಲೇ ಆಕೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT